ಭೌತ ವಿಜ್ಞಾನದಲ್ಲಿ ಕ್ರಾಂತಿ ಮೂಡಿಸಿದ ಐನಸ್ಟೀನ್ : ಎಚ್.ಬಿ.ಪಾಟೀಲ

EDP
Published on

ಬಸವೇಶ್ವರ ಸಮಾಜ ಸೇವಾ ಬಳಗದಿಂದ ಜಗದ್ವಿಖ್ಯಾತ ಭೌತವಿಜ್ಞಾನಿ ಅಲ್ಬರ್ಟ್ ಐನಸ್ಟೀನ್ ಜನ್ಮದಿನಾಚರಣೆ

ಕಲಬುರಗಿ: ಯಾವುದೇ ಒಂದು ರಾಷ್ಟçದ ಅಭಿವೃದ್ಧಿಯು ಅಲ್ಲಿನ ವಿಜ್ಞಾನ ಕ್ಷೇತ್ರದ ಬೆಳವಣಿಗೆಯ ಮೇಲೆ ಅವಲಂಬಿಸಿದೆ. ಅನೇಕ ವಿಜ್ಞಾನಿಗಳು ತಮ್ಮ ಜೀವವನ್ನು ಸವೆಸಿ ವಿಜ್ಞಾನ ಕ್ಷೇತ್ರವನ್ನು ಬೆಳೆಸಿದ್ದಾರೆ. ವಿಶ್ವ ಪ್ರಸಿದ್ದ ಭೌತವಿಜ್ಞಾನಿ ಅಲ್ಬರ್ಟ್ ಐನಸ್ಟೀನ್ ಅವರು ಇ=ಎಂಸಿ(೨) ಎಂಬ ‘ಸಾಪೇಕ್ಷತಾ ಸಿದ್ಧಾಂತ’ದ ಮೂಲಕ ಭೌತವಿಜ್ಞಾನದಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತಂದಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಜರುಗಿದ ‘ಜಗದ್ವಿಖ್ಯಾತ ಭೌತವಿಜ್ಞಾನಿ ಅಲ್ಬರ್ಟ್ ಐನಸ್ಟೀನ್ ಜನ್ಮದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.

ಐನಸ್ಟೀನ್ ಅವರು ೧೮೭೯ರಲ್ಲಿ ಜರ್ಮನಿಯ ಅಲ್ಮ್ ಎಂಬಲ್ಲಿ ಜನಿಸಿದರು. ಕ್ವಾಂಟ್‌A ಮೆಕಾನಿಕ್ಸ್ ಕ್ಷೇತ್ರದಲ್ಲಿಯೂ ಕೂಡಾ ಗಣನೀಯ ಸೇವೆ ಸಲ್ಲಿಸಿದ್ದಾರೆ. ೧೯೨೧ರಲ್ಲಿ ಅವರಿಗೆ ನೋಬೆಲ್ ಪ್ರಶಸ್ತಿ ದೊರೆತಿದೆ. ಇಂಥ ಮೇರು ವಿಜ್ಞಾನಿಗಳ ಬಗ್ಗೆ ಅಧ್ಯಯನ ಮಾಡಿ, ಅವರಂತೆ ಸಂಶೋಧನೆ ಮಾಡುವ ಮೂಲಕ ವಿಜ್ಞಾನಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಮಹಾದೇವಪ್ಪ ಎಚ್.ಬಿರಾದಾರ, ಓಂಕಾರ ವಠಾರ, ಬಸವರಾಜ ಎಸ್.ಪುರಾಣೆ, ಸಿದ್ದಾರೂಡ ಬಿರಾದಾರ ಸೇರಿದಂತೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net