

ಬೆಳಗಾವಿ: ಇಲ್ಲಿನ ಮಹಾನಗರ ವಲಯದ ಮರಾಠ ಮಂಡಳ ಸಂಯುಕ್ತ ಪದವಿ ಪೂರ್ವ ಶಾಲೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಜಿಪಂ ಸಿಇಒ ರಾಹುಲ ಶಿಂಧೆ ದಿಢೀರ್ ಭೇಟಿ ನೀಡಿ ಸಿಸಿಟಿವಿ, ಭದ್ರತೆ ಪರಿಶೀಲಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿನ ಸಿಸಿಟಿವಿ ಹಾಗೂ ಪರೀಕ್ಷಾ ಕೇಂದ್ರದಲ್ಲಿ ಏರ್ಪಡಿಸಿದ್ದ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ, ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ ನಗರ, ಗ್ರಾಮೀಣ ಪ್ರದೇಶಗಳಲ್ಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿದರು. ಅಲ್ಲದೆ, ಯಾವುದೇ ಕೇಂದ್ರದಲ್ಲಿ ಪರೀಕ್ಷಾ ಅಕ್ರಮ ನಡೆಯದಂತೆ ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆಯವರು ಪರೀಕ್ಷಾ ಕೇಂದ್ರ ಪ್ರವೇಶಿಸದಂತೆ ನಿರ್ದೇಶನ ನೀಡಿದರು.
ಬುಧವಾರ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಗೆ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 97 ಪರೀಕ್ಷಾ ಕೇಂದ್ರಗಳಲ್ಲಿ 32,783 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 613 ವಿದ್ಯಾರ್ಥಿಗಳು ಗೈರಾಗಿದ್ದರು. ಕೆಲವು ಕಡೆ ಸಾರಿಗೆ ಬಸ್‌ಗಳ ಸಮಸ್ಯೆಯಿಂದ 10 ನಿಮಿಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಆಗಮಿಸಿದ್ದರು. ಅದನ್ನು ಹೊರತುಪಡಿಸಿದರೆ ಎಲ್ಲ ಕಡೆ ಸುಸೂತ್ರವಾಗಿ ಪರೀಕ್ಷೆಗಳು ನಡೆದಿವೆ ಎಂದು ಅಕಾರಿಗಳು ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಕಾರಿ ರವಿ ಭಜಂತ್ರಿ, ಜಿಲ್ಲಾ ನೋಡಲ್ ಅಕಾರಿ ಎನ್.ಆರ್. ಪಾಟೀಲ, ಮರಾಠ ಮಂಡಳ ಕೇಂದ್ರ ಮುಖ್ಯ ಅೀಕ್ಷಕಿ ಲತಾ ಶಿಂಧೆ ಇತರರಿದ್ದರು.