

ಮೈಸೂರು: ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಮಾರ್ಚ್ 3ರಂದು ಆಯೋಜಿಸಲಾಗಿದ್ದು, ಯಾವುದೇ ಕೊರತೆಯಾಗದಂತೆ ಎಚ್ಚರ ವಹಿಸಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ 2024ನೇ ಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತು ಶನಿವಾರ ಆಯೋಜಿಸಿದ್ದ ಪೂರ್ವಸಿದ್ಧತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೋಲಿಯೋ ಲಸಿಕಾ ಅಭಿಯಾನದಲ್ಲಿ ವಿವಿಧ ಇಲಾಖೆಗಳ ಪಾತ್ರದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ ಅವರು, ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಹಾಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ವಿರುದ್ಧದ ಗೆಲುವನ್ನು ಮುಂದುವರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು