ಹುಬ್ಬಳ್ಳಿ: ಇಲ್ಲಿಯ ಕೊಯಿನ್ ರಸ್ತೆಯ ಕೆಎಲ್ಇ ಕೋ-ಆಪರೇಟಿವ್ ಆಸ್ಪತ್ರೆಯಲ್ಲಿ ಡಿ. 28ರಂದು ಬೆಳಗ್ಗೆ 10ಕ್ಕೆ ಕಿವಿ, ಮೂಗು, ಗಂಟಲಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷವಾಗಿ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಟಾನ್ಸಿಲ್ ಗಳಿಗೆ (ಗಲಗ್ರಂಥಿ) ಸಂಬಂಧಿಸಿದ ರೋಗದ ತಪಾಸಣೆ ಮತ್ತು ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು.
ಮಕ್ಕಳ ಪಾಲಕರು ತಪಾಸಣೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಲು ಕೆಎಲ್ಇ ಜೆಜಿಎಂಎಂ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಎಂ.ಜಿ. ಹಿರೇಮಠ ಮತ್ತು ಕೆಎಲ್ಇ ಕೋ-ಆಪರೇಟಿವ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ವೈ.ಎಫ್. ಹಂಜಿ ಪ್ರಕಟಣೆಯಲ್ಲಿ ಕೋರಿದ್ದಾರೆ.