ಪ್ರವೇಶೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

New Project (14)
Published on

ಕಡಬ: ಕಡಬ ಹನುಮಾನ್ ನಗರದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಯಾದವಶ್ರೀ ಸಭಾಂಗಣದಲ್ಲಿ ಜರುಗಿತು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾನೂನು ಮಹಾವಿದ್ಯಾಲಯ ಅಧ್ಯಕ್ಷ ಸುರೇಂದ್ರ ಕಿಣಿ ಅಗ್ನಿಕುಂಡಕ್ಕೆ ಘೃತಾಹುತಿ ಮಾಡುವ ಮೂಲಕ ಪ್ರವೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆ ಆಡಳಿತ ಸಮಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ ಕಡಬ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಸ್ಥೆ ಸಂಚಾಲಕಿ ಸವಿತಾ ಶಿವಸುಬ್ರಮಣ್ಯ ಭಟ್, ಆಡಳಿತ ಮಂಡಳಿ ಸದಸ್ಯೆ ಪುಲಸ್ತ್ಯಾ ರೈ, ಮುಖ್ಯ ಶಿಕ್ಷಕಿ ಶೈಲಶ್ರೀ ರೈ ಎಸ್.ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಹೋಮ ಕುಂಡಕ್ಕೆ ಹವಿಸ್ಸು ಸಮರ್ಪಣೆ ಮಾಡಿ ಅತಿಥಿಗಳಿಂದ ಸಿಹಿ ಸ್ವೀಕರಿಸಿ ಆಶೀರ್ವಾದ ಪಡೆದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ 11ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಕಾರ್ಯನಿರ್ವಹಣಾಧಿಕಾರಿ ವೆಂಕಟರಮಣ ರಾವ್ ಮಂಕುಡೆ ಪ್ರಸ್ತಾವಿಸಿದರು. ವಿದ್ಯಾರ್ಥಿ ನಾಯಕ ಕೀರ್ತನ್‌ಕುಮಾರ್ ಸ್ವಾಗತಿಸಿದರು. ಉಪನಾಯಕ ಪಿ.ಆರ್.ಚೇತನ್ ಗೌಡ ವಂದಿಸಿದರು. ಸಿಂಚನ ಕೆ.ಎಸ್.ಕಾರ್ಯಕ್ರಮ ನಿರ್ವಹಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net