ಆದರ್ಶ ಶಾಲೆ ಪ್ರವೇಶ ಪರೀಕ್ಷೆ  -ಮಾ. 23

adarsha
Published on

ಹೊಳೆನರಸೀಪುರ: ತಾಲೂಕಿನ ತಟ್ಟೆಕೆರೆ ಆದರ್ಶ ಶಾಲೆಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ಮಾ. 23ರ ಭಾನುವಾರ ಕೆ.ಪಿ.ಎಸ್.ಸಿ. ಶಾಲೆಯಲ್ಲಿ ಹಾಗೂ ಬಾಲಕಿಯರ ಪದವಿಪೂರ್ವ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಉತ್ತೀರ್ಣರಾದವರಿಗೆ 6ರಿಂದ 10 ನೇ ತರಗತಿವರೆಗಿನ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ದೊರಕಲಿದೆ. ಅರ್ಜಿ ಸಲ್ಲಿಸಿರುವ ತಾಲೂಕಿನ 618 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. ಹೆಚ್ಚು ಅಂಕಗಳಿಸುವ 120 ವಿದ್ಯಾರ್ಥಿಗಳಿಗೆ ನಿಯಮಾನುಸಾರ ಆದರ್ಶ ಶಾಲೆಗೆ ದಾಖಲಿಸಿಕೊಳ್ಳಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net