ಆದರ್ಶ ವಿದ್ಯಾಲಯದ 6ನೇ ತರಗತಿಗೆ ಪ್ರವೇಶ ಪರೀಕ್ಷೆ

Published on

ತಿ.ನರಸೀಪುರ: ತಾಲೂಕಿನ ಸೋಸಲೆ ಗ್ರಾಮದ ಬಳಿಯಿರುವ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಗೆ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗೆ ನಡೆಯುವ ಪ್ರವೇಶ ಪರೀಕ್ಷೆಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಯ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆದರ್ಶ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿಯನ್ನು  ಸಲ್ಲಿಸಲು ಫೆ.28ರವರೆಗೆ ಕಾಲಾವಕಾಶ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9900163242, 9482986688 ಹಾಗೂ 9900163242 ಗಳಿಗೆ ಕರೆ ಮಾಡಿ ಸಂಪರ್ಕಿಸಬೇಕೆಂದು ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಎಂ.ಪಿ ಮಂಜಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net