

ವಿಜಯವಾಣಿ ಸುದ್ದಿಜಾಲ ಧಾರವಾಡ
ಸಂವಿಧಾನ ದಿನ ನಿಮಿತ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ., ಸಮಾಜ ಕಲ್ಯಾಣ ಇಲಾಖೆ, ಧಾರವಾಡ ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರವರಿಗೆ ಒಂದು ದಿನದ ಪ್ರವೇಶ ತರಬೇತಿ ಕಾರ್ಯಾಗಾರವನ್ನು ನ. 26ರಂದು ಬೆಳಗ್ಗೆ 10 ಗಂಟೆಗೆ ಜಿಪಂ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಜಿ. ರಮಾ ಕಾರ್ಯಕ್ರಮ ಉದ್ಘಾಟಿಸುವರು. ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಕರ್ನಾಟಕ ವಕೀಲರ ಪರಿಷತ್ ಸದಸ್ಯ ಎ.ಎ.ಮಗದುಮ್, ವಿ.ಡಿ.ಕಾಮರೆಡ್ಡಿ, ಅಶೋಕ ಏಣಗಿ, ಜಿ.ಜಿ.ಅಮೋಘಿಮಠ, ಸ್ಮಿತಾ ಗಿರಗಾವಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.