

ಮಂಡ್ಯ: ರಾಜ್ಯ ಸರ್ಕಾರದ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್)ದಿಂದ ಜೂ.19ರಿಂದ ತಾಲೂಕಿನ ವಿ.ಸಿ ಫಾರ್ಮ್‌ನ ಕೃಷಿ ವಿಜ್ಞಾನ ಕೇಂದ್ರದಲ್ಲಿ 10 ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆ, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ಆಸಕ್ತ 18 ವರ್ಷದಿಂದ 45 ವರ್ಷ ವಯಸ್ಸಿನವರಾಗಿರಬೇಕು. ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಜೂ.17ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರ ಸಿಡಾಕ್ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ಮೊ.ಸಂ 9008194396 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.