ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಸೆ.2ರಿಂದ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

training-logo-png-transparent
Published on

ಮಂಡ್ಯ: ಕೌಶಲಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ವಿಶೇಷ ಘಟಕ ಯೋಜನೆಯಡಿ ಜಿಲ್ಲೆಯಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸೆ.2ರಿಂದ ನಗರದ ಹರ್ಡೀಕರ್ ಭವನದಲ್ಲಿ ಹತ್ತು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಆಯೋಜಿಸಲಾಗಿದೆ.

ಇದರ ಪೂರ್ವಭಾವಿಯಾಗಿ ಅಭ್ಯರ್ಥಿಗಳ ಆಯ್ಕೆ ಕುರಿತು ವೈಯಕ್ತಿಕ ಸಮಾಲೋಚನೆ ಸಭೆಯನ್ನು ಆ.31ರಂದು ಬೆಳಗ್ಗೆ 10 ಗಂಟೆಗೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದೆ. ಕನಿಷ್ಟ 18 ವರ್ಷದೊಳಗಿನ ಓದಲು ಮತ್ತು ಬರೆಯಲು ಬರುವವರು ಸಭೆಯಲ್ಲಿ ಪಾಲ್ಗೊಳ್ಳಬಹುದು. ಮಾಹಿತಿಗೆ ಮೊ.ಸಂ 9008194396 ಮತ್ತು 7760145784 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net