ಬಂಡೇರಂಗನಾಥ ದೇಗುಲಕ್ಕೆ ಭಕ್ತರ ಪ್ರವೇಶ ಬಂದ್

leopard
Published on

ಸಿಂಧನೂರು: ತಾಲೂಕಿನ ರೌಡಕುಂದಾ ಗ್ರಾಮದ ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟದಲ್ಲಿದ್ದು, ಜನರ ಹಿತದೃಷ್ಟಿಯಿಂದ ಲಕ್ಷ್ಮೀ ಬಂಡೇರಂಗನಾಥನ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಬಂದ್ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ರಾಘವೇಂದ್ರರಾವ್ ರೌಡಕುಂದಾ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಹೇಳಿಕೆ ನೀಡಿರುವ ಅವರು, ಚಿರತೆಯು ಆಕಳು, ಆಡು ಮೇಲೆ ದಾಳಿ ಮಾಡಿ ಕೊಂದಿದೆ. ಹೀಗಾಗಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಪುರುಷೋತ್ತಮ ನೇತೃತ್ವದ ತಂಡ ತೀವ್ರ ಶೋಧ ನಡೆಸಿದ್ದು, ಗ್ರಾಮಸ್ಥರು ಸಹಕಾರ ನೀಡುತ್ತಿದ್ದಾರೆ.

ಆದ್ದರಿಂದ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶವಿಲ್ಲ. ಇದಕ್ಕೆ ಸಹಕರಿಸಬೇಕೆಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net