ಕೂಡ್ಲೂರುವಿನಲ್ಲಿ ಪರಿಸರ ಜಾಗೃತಿ ಆಂದೋಲನ

02mdk04
Published on

ಮಡಿಕೇರಿ:

ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಗಿಡ ನೆಟ್ಟು ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಸಂರಕ್ಷಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಕರೆ ನೀಡಿದರು.

ಕುಶಾಲನಗರ ತಾಲೂಕಿನ ಕೂಡುಮಂಗಳೂರು (ಕೂಡ್ಲೂರು) ಸರಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್ ಮತ್ತು ಎನ್‌ಎಸ್‌ಎಸ್ ಘಟಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದಲ್ಲಿ ಗೋ ಗ್ರೀ ಅಭಿಯಾನದ ಅಂಗವಾಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಗಿಡ ನೆಟ್ಟು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಮ್ಮ ಸುತ್ತಲಿನ ಪರಿಸರ ಸೇರಿದಂತೆ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರ ಶುಚಿತ್ವಕ್ಕೆ ಒತ್ತು ನೀಡಬೇಕು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಮಾತನಾಡಿ, ಪ್ರತಿ ವಿದ್ಯಾರ್ಥಿಯೂ ಒಂದೊಂದು ಗಿಡ ನೆಟ್ಟು ಪೋಷಿಸಿ ಬೆಳೆಸುವ ಸಂಕಲ್ಪ ತೊಡಬೇಕು ಎಂದರು.

ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿ ವಿದ್ಯಾರ್ಥಿಗಳು ತಮ್ಮನ್ನು ಸ್ವಚ್ಛತೆಯೊಂದಿಗೆ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಶಾಲೆಯಲ್ಲಿ ಇಕೋ ಕ್ಲಬ್ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಮಕ್ಕಳು ಸ್ವಚ್ಛ ಶಾಲೆ-ಸ್ವಚ್ಛ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದು ಹೇಳಿದರು.

ತಹಶೀಲ್ದಾರ್ ಟಿ.ಎಂ.ಪ್ರಕಾಶ್, ಗ್ರಾ.ಪಂ.ಅಧ್ಯಕ್ಷೆ ಇಂದಿರಾ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ಆರ್‌ಎಂಎಸ್‌ಎ. ಡಿವೈಪಿಸಿ ಸೌಮ್ಯ, ವಿ?ಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಪಿ.ರೇವಣ್ಣ, ಸಮಿತಿ ಸದಸ್ಯರು ಇದ್ದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತ ಭಿತ್ತಿ ಫಲಕಗಳನ್ನು ಹಿಡಿದು ಪರಿಸರ ಸಂರಕ್ಷಣಾ ಘೋ?ಣೆಗಳನ್ನು ಪ್ರಚುರಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net