ಕಾವೇರಿ ವಿದ್ಯಾಸಂಸ್ಥೆಯಲ್ಲಿ ಪರಿಸರ ದಿನ ಆಚರಣೆ

7ss1aouto chalakanige gida vitarane
ಪರಿಸರ ದಿನಾಚರಣೆ ಪ್ರಯುಕ್ತ ಪಟ್ಟಣದ ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳು ಆಟೋ ಚಾಲಕರಿಗೆ ಗಿಡಗಳನ್ನು ವಿತವರಣೆ ಮಾಡಲಾಯಿತು.
Published on

ಶನಿವಾರಸಂತೆ: ಪಟ್ಟಣದ ಕಾವೇರಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ಪಟ್ಟಣದ ಆಟೋ ಚಾಲಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಪೌರಕಾರ್ಮಿಕರ ಬಳಿಗೆ ತೆರಳಿದ ವಿದ್ಯಾರ್ಥಿಗಳು ಗಿಡಗಳನ್ನು ವಿತರಿಸಿದರು. ಅಲ್ಲದೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಪೌರ ಕಾರ್ಮಿಕರನ್ನು ವಿದ್ಯಾಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಪುಟಾಣಿಗಳು ಅರಣ್ಯ ಮತ್ತು ಪರಿಸರಕ್ಕೆ ಸಂಬಂಧಪಟ್ಟ ವೇಷಭೂಷಣ ತೊಟ್ಟು ಪಟ್ಟಣದ ಕೆಆರ್‌ಸಿ ವೃತ್ತದವರೆಗೆ ಮೆರವಣಿಗೆ ತೆರಳಿದರು. ಈ ಮೂಲಕ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ವಿದ್ಯಾಸಂಸ್ಥೆ ಪ್ರಾಂಶುಪಾಲ ಎಚ್.ಎನ್.ದೇವರಾಜ್, ಉಪನ್ಯಾಸಕರಾದ ಜಿ.ಎನ್.ಪದ್ಮಾವತಿ, ಎಚ್.ಎ.ಕಾಂತ, ಶಿಕ್ಷಕರಾದ ಎಸ್.ಕೆ.ಭಾಸ್ಕರ್, ಜಿ.ಎಸ್.ಜಾನಕಿ, ಎಸ್.ಎಸ್.ಬಿಂದು, ಎಸ್.ಎಸ್.ನಜ್ಮ, ಫಣಿರಾಜ್ ಹಾಗೂ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಪ್ರಮುಖರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net