ಕಾಪು ತಾಲೂಕು ಕಚೇರಿಯಲ್ಲಿ ಪರಿಸರ ದಿನ ಆಚರಣೆ

pdb-1
Published on

ಪಡುಬಿದ್ರಿ: ಕಾಪು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಉದ್ಯಾನವನ ನಿರ್ಮಿಸಿ ಸೌಂದರ್ಯೀಕರಣಗೊಳಿಸಲು ಪ್ರಯತ್ನಿಸಲಾಗುವುದು. ಅದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದರು.

ಕಾಪು ತಾಲೂಕು ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.

ವಾರ್ಷಿಕವಾಗಿ 11ಮಿಲಿಯನ್ ಟನ್ ಪ್ಲಾಸ್ಟಿಕ್ ಕಸವನ್ನು ನೀರಿನ ಪರಿಸರಕ್ಕೆ ಸುರಿಯಲಾಗುತ್ತದೆ. ಭೂಕುಸಿತಗಳು ಮತ್ತು ಒಳಚರಂಡಿಗಳಿಂದ ಬರುವ ಮೈಕ್ರೋಪ್ಲಾಸ್ಟಿಕ್‌ಗಳು ಮಣ್ಣಿನಲ್ಲಿ ಸಂಗ್ರಹವಾಗುತ್ತವೆ. ಇದು ಪರಿಸರ ಹಾನಿಯನ್ನುಂಟು ಮಾಡುತ್ತದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಉಪ ತಹಸೀಲ್ದಾರ್ ರವಿಕಿರಣ್, ಕಂದಾಯ ನಿರೀಕ್ಷಕ ಇಜ್ಜಾರ್ ಸಾಬಿರ್ ಹಾಗೂ ಇತರ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net