

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಆವರಣದಲ್ಲಿ ಜೂನ್ 5ರಂದು ಬೆಳಗ್ಗೆ 10ಕ್ಕೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಆಯೋಜಿಸಲಾಗಿದೆ.
ಬಿವಿಬಿ ಕ್ಯಾಂಪಸ್ ನಲ್ಲಿರುವ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಏರ್ಪಡಿಸಿರುವ ಕಾರ್ಯಕ್ರಮವನ್ನು ಕೆಎಲ್ಇ ತಾಂತ್ರಿಕ ವಿವಿ ಕುಲಪತಿ ಡಾ. ಪ್ರಕಾಶ ತೆವರಿ ಉದ್ಘಾಟಿಸುವರು.
ಈ ಸಂದರ್ಭದಲ್ಲಿ ಸುಮಾರು ನೂರು ಗಿಡಗಳನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡಲಾಗಿದೆ ಎಂದು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಎಂ.ಆರ್. ಪಾಟೀಲ ತಿಳಿಸಿದ್ದಾರೆ.