

ರಾಯಚೂರು ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್ ಫೀಲ್ಡï ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆಂದು ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು ಅವರು ಸಂತಸ ವ್ಯಕ್ತಪಡಿಸಿz್ದÁರೆ.
ಈ ಕುರಿತು ಪ್ರಕರಣೆ ನಿಡಿದವರು, ರಾಯಚೂರು ನಗರದಲ್ಲಿ ಗ್ರೀನï ಫೀಲ್ಡï ವಿಮಾನ ನಿಲ್ದಾಣವನ್ನ ನಿರ್ಮಿಸಬೇಕು, ಈ ಮೂಲಕ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಇಂಬು ನೀಡಬೇಕು ಎನ್ನುವುದು ನಮ್ಮ ಸರಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಹೊಸ ಸರಕಾರ ಅಽಕಾರಕ್ಕೆ ಬಂದ ನಂತರ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯವನ್ನು ಚುರುಕು ಗೊಳಿಸಲಾಗಿತ್ತು. ನಮ್ಮ ರಾಜ್ಯ ಸರ್ಕಾರ ರಾಯಚೂರಿನಲ್ಲಿ ನೂತನ ಗ್ರೀನ್ ಫೀಲ್ಡ್ ಏರ್‌ಪೋರ್ಟ್ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣದಿಂದ ಕಲ್ಯಾಣ ಕರ್ನಾಟಕದ ಪ್ರಮುಖ ಜಿ¯್ಲೆಗೆ ಉತ್ತಮ ಸಂಪರ್ಕ ದೊರೆತು, '
ಸರ್ವತೋಮುಖ ಅಭಿವೃದ್ದಿಗೆ ಅನುಕೂಲವಾಗಲಿದೆ. ತ್ವರಿತಗತಿಯಲ್ಲಿ ಕೇಂದ್ರ ಪರಿಸರ ಮಂತ್ರಾಲಯ ದಿಂದ ಅನುಮತಿ ದೊರೆತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ವಿಮಾನಯಾನ ಸಚಿವರಿಗೆ ಅಭಿನಂದನೆ ಸಲ್ಲಿಸಿz್ದÁರೆ.