

ಮಂಡ್ಯ: ತಾಲೂಕಿನ ಕೊತ್ತತ್ತಿ ಗ್ರಾಮದ ವಿದ್ಯಾಗಣಪತಿ ಪ್ರೌಢಶಾಲೆಯಲ್ಲಿ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಪರಿಸರದ ಜಾಗೃತಿ ಮೂಡಿಸಿದರು.
ರಸ್ತೆ ಸುರಕ್ಷತೆ, ಸಾರಿಗೆ, ಕಾನೂನು, ಪರಿಸರ ಕಾಳಜಿ, ಜಾಗತಿಕ ತಾಪಮಾನ ಹಾಗೂ ನವೀಕರಿಸಬಹುದಾದ ಇಂಧನಗಳ ಬಗ್ಗೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಹೊರಟು ಬೀದಿ ನಾಟಕಗಳ ಮೂಲಕ ಗ್ರಾಮಸ್ಥರಿಗೆ ಪರಿಸರ ಕಾಳಜಿಯ ಬಗ್ಗೆ ತಿಳಿಸಲಾಯಿತು. ನಂತರ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಪಿಇಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ನಂಜುಂಡಸ್ವಾಮಿ, ವಿದ್ಯಾಗಣಪತಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಸಿ.ರಾಜು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶಿವಶಂಕರ್, ದೈಹಿಕ ಶಿಕ್ಷಣ ಶಿಕ್ಷಕ ಪವನ್‌ಕುಮಾರ್ ಇತರರಿದ್ದರು.