ನಾಣಚ್ಚಿ ಸರ್ಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ

16 vpt. 3
ವಿರಾಜಪೇಟೆ ತಾಲೂಕಿನ ನಾಣಚ್ಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ರಾಜು, ಕೃಷ್ಣ, ಅನಿತಾ, ಸುನಂದಾ ಮಣಿ, ಸ್ವಪ್ನ ಇದ್ದರು.
Published on

ವಿರಾಜಪೇಟೆ : ವಿರಾಜಪೇಟೆ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಾಣಚ್ಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಗಿತ್ತು.

ಕೆ.ಬಾಡಗ ಗ್ರಾಮ ಪಂಚಾಯಿತಿ ಅಧ್ಯಕ್ಷ ರಿತೇಶ್ ಬಿದ್ದಪ್ಪ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರ ದಿನಾಚರಣೆ ಉತ್ತಮ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆದಾಗ ಪರಿಸರದ ಬಗೆಗಿನ ಕಾಳಜಿ ಹಾಗೂ ಅರಿವು ಎಲ್ಲರಲ್ಲೂ ಮೂಡಲಿದೆ ಎಂದು ತಿಳಿಸಿದರು.

ಶಿಕ್ಷಕ ಹರೀಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಇದೇ ಸಂದರ್ಭ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಮುಖಂಡ ಗುಂಡಿಯಂಗಡ ರಾಜು, ಮುಖ್ಯಶಿಕ್ಷಕ ಕೃಷ್ಣ, ಒಕ್ಕೂಟದ ಅಧ್ಯಕ್ಷ್ಷೆ ಸುನಂದಾ ಮಣಿ, ಒಕ್ಕೂಟ ಪದಾಧಿಕಾರಿ ಅನಿತಾ, ಎಸ್‌ಡಿಎಂಸಿ ಅಧ್ಯಕ್ಷ ಜೆ.ಜೆ.ಪ್ರತಾಪ್, ಕಾನೂರು ವಲಯ ಮೇಲ್ವಿಚಾರಕ ಸುಜೀರ್, ಕೃಷಿ ಮೇಲ್ವಿಚಾರಕ ವಸಂತ್, ಸೇವಾ ಪ್ರತಿನಿಧಿ ಸ್ವಪ್ನಾ, ಶಿಕ್ಷಕಿ ಪ್ರಿಯಾ, ಶಿಕ್ಷಕ ವೃಂದ, ಸಂಘದ ಸದಸ್ಯರು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net