ಪರಿಸರ ಜಾಗೃತಿ ಮೂಡಿಸಬೇಕು

P PURA SASI GIDA 03
Published on

ಪರಶುರಾಮಪುರ: ಪ್ರಾಥಮಿಕ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಸ್ವಚ್ಛತೆ, ಪರಿಸರ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಶಾಲಾ ಸಮಿತಿ ಅಧ್ಯಕ್ಷ ಅಜ್ಜಯ್ಯ ಹೇಳಿದರು.

ಗೋವರ್ಧನಗಿರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನ ಹಾಗೂ ಸಸ್ಯ ಶಾಮಲ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು, ಶಾಲಾ ಆವರಣದಲ್ಲಿ ಸಸಿಗಳನ್ನು ನೆಡಸಲಾಯಿತು.
ಶಾಲಾ ಸಮಿತಿಯ ಪದಾಧಿಕಾರಿಗಳಾದ ಜಯಲಕ್ಷ್ಮೀ, ಚನ್ನರಾಯಪ್ಪ, ತಿಪ್ಪೇಸ್ವಾಮಿ, ಮುಖ್ಯಶಿಕ್ಷಕ ವಿ.ರಮೇಶ, ಶಿಕ್ಷಕಿ ಎಸ್.ಅನುಸೂಯಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net