

ವಿಜಯವಾಣಿ ಸುದ್ದಿಜಾಲ ಸುಳ್ಯ
ಒಂದೆಡೆ ರೈತರು ಹಳ್ಳಿಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಇನ್ನೊಂದೆಡೆ ಕೈಗಾರಿಕೊದ್ಯಮಿಗಳು ಅರಣ್ಯಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಇದು ಅಭಿವೃದ್ಧಿಯ ಲಕ್ಷಣ ಅಲ್ಲ. ಮಕ್ಕಳಲ್ಲಿ ಪರಿಸರದ ಕಾಳಜಿಯನ್ನು ಬೆಳೆಸಿ ಕೃಷಿಯಲ್ಲಿ ಆಸಕ್ತಿ ಮೂಡಿಸುವ ಮೂಲಕ ಕೃಷಿಯನ್ನೂ ಉಳಿಸಬೇಕಿದೆ ಎಂದು ಪರಿಸರ ತಜ್ಞ ದೆಹಲಿಯ ಅರುಣ್ ಕಶ್ಯಪ್ ಹೇಳಿದರು.
ಸುಳ್ಯದ ಸ್ನೇಹ ಶಾಲೆಯಲ್ಲಿ ಪರಿಸರ ಸಂವಹನ ಸರಣಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಮಾತನಾಡಿ, ಪರಿಸರ ಸಂರಕ್ಷಣೆಯನ್ನು ನಿರ್ಲಕ್ಷಿಸಿದರೆ ಭವಿಷ್ಯದಲ್ಲಿ ಹೆಚ್ಚಿನ ದುರಂತಗಳನ್ನು ಕಾಣಬೇಕಾದೀತು ಎಂದರು.
ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಚಂದ್ರಶೇಖರ ದಾಮ್ಲೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಸುಳ್ಯ, ಪುತ್ತೂರು ಮತ್ತು ವಿಟ್ಲ ವಲಯಗಳಿಂದ ಪರಿಸರಸಾಕ್ತ ಕೃಷಿಕರು ಭಾಗವಹಿಸಿದ್ದರು. ಅಖಿಲ ಭಾರತ ಅಡಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಸಿ.ಜಿ.ವೆಂಕಟಗಿರಿ ವಂದಿಸಿದರು. ಸ್ನೇಹ ಶಾಲಾ ಶಿಕ್ಷಕ ದೇವಿಪ್ರಸಾದ್ ನಿರೂಪಿಸಿದರು.