ಆರ್ಥಿಕ ಅಭಿವೃದ್ಧಿ ಜತೆಗೆ ಪರಿಸರದ ಕಾಳಜಿ

GKN DAGRA
Published on

ಗೋಕರ್ಣ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬಿ.ಸಿ. ಟ್ರಸ್ಟ್ ಸಹಯೋಗದಲ್ಲಿ ಇಲ್ಲಿನ ಮಾದರಿ ಶಾಲೆಯಲ್ಲಿ ಏರ್ಪಡಿಸಿದ್ದ ಪರಿಸರ ಮಾಹಿತಿ ಕಾರ್ಯಾಗಾರವನ್ನು ಬಿಜೆಪಿ ಜಿಲ್ಲಾ ಹಿಂದುಳಿದ ಘಟಕದ ಖಜಾಂಚಿ ಮಹೇಶ ಶೆಟ್ಟಿ ಅವರು ಗಿಡ ನೆಟ್ಟು ಉದ್ಘಾಟಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕ ಅಭಿವೃದ್ಧಿ ಜತೆಗೆ ಪರಿಸರದ ಬಗ್ಗೆಯೂ ಸಂಸ್ಥೆ ಕಾಳಜಿ ವಹಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಇಂತಹ ಮಾಹಿತಿ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಡುವುದರಿಂದ ಚಿಕ್ಕ ವಯಸ್ಸಿನಲ್ಲಿಯೇ ಮರ-ಗಿಡ ಮತ್ತು ಪರಿಸರದ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ನಾಯಕ ವಹಿಸಿದ್ದರು. ಯೋಜನೆಯ ಕೃಷಿ ಮೇಲ್ವಿಚಾರಕ ಚಿದಾನಂದ ಅವರು ಗ್ರಾಮಾಭಿವೃದ್ಧಿ ಯೋಜನೆಯ ಪರಿಸರ ಕುರಿತ ಕಾರ್ಯಕ್ರಮಗಳನ್ನು ತಿಳಿಸಿದರು. ವಲಯ ಮೇಲ್ವಿಚಾರಕ ರಮೇಶ ಸ್ವಾಗತಿಸಿ ನಿರ್ವಹಿಸಿದರು. ಸೇವಾ ಪ್ರತಿನಿಧಿ ಸುನೀತಾ ವಂದಿಸಿದರು. ಕಾರ್ಯಾಗಾರ ನಿಮಿತ್ತ ಮಕ್ಕಳಿಗೆ ಪರಿಸರ ಪೂರಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net