ಕವನ ಮೂಲಕ ಪರಿಸರ ಸಂರಕ್ಷಣೆ ಕಾಳಜಿ

h10-lions school
Published on

ಹುಬ್ಬಳ್ಳಿ: ಇಲ್ಲಿಯ ವಿಜಯನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತು ನುಡಿಗಟ್ಡುಗಳು, ಕವನಗಳನ್ನು ಚಿತ್ರಪಟಗಳೊಂದಿಗೆ ವಿವರಿಸಿದರು.

ಮುಖೋಪಾಧ್ಯಾಯಿನಿ ನೇಹಾ ಗಡಗೋಳಿಯವರು ಸಸಿಗಳಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು. ಪರಿಸರ ರಕ್ಷಣೆ ಬಗ್ಗೆ ಪ್ರತಿಜ್ಞೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net