ಸರ್ವನಾಶದತ್ತ ಕೊಂಡೊಯ್ಯುತ್ತಿರುವ ಪರಿಸರ ನಾಶ

ಸರ್ವನಾಶದತ್ತ ಕೊಂಡೊಯ್ಯುತ್ತಿರುವ ಪರಿಸರ ನಾಶ
Published on

ಮದ್ದೂರು: ಪರಿಸರ ನಾಶ ಇಂದು ಜಗತ್ತನ್ನು ಸರ್ವನಾಶದತ್ತ ಕೊಂಡೊಯ್ಯುತ್ತಿದೆ ಎಂದು ಪ್ರಾಂಶುಪಾಲ ಡಾ.ಅಣ್ಣಯ್ಯ ತೈಲೂರು ಅಭಿಪ್ರಾಯಪಟ್ಟರು.
ತಾಲೂಕಿನ ಕೊಪ್ಪ ಸರ್ಕಾರಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪರಿಸರವನ್ನು ವಿನಾಶದತ್ತ ಕೊಂಡೊಯ್ಯುವುದು ಅತಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪರಿಸರ ಸಂರಕ್ಷಣೆಗೆ ಬೇಕಾದ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದರು.

ದೇಶಾದ್ಯಂತ ಪರಿಸರ ಉಳಿವಿಗಾಗಿ ಹತ್ತಾರು ಆಂದೋಲನಗಳು ನಡೆಯುತ್ತಿದ್ದು, ಪ್ರತಿಯೊಬ್ಬರೂ ಪರಿಸರ ರಕ್ಷಣೆ ಕುರಿತು ಶಪಥ ಕೈಗೊಳ್ಳಬೇಕು ಎಂದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಸಂತೋಷ್, ಪ್ರಾಧ್ಯಾಪಕಿ ಜಿ.ಯಶೋದಾ, ಶ್ರೀನಿವಾಸ್, ಡಾ. ಕೆ.ವಿ.ಲತಾ, ಡಾ.ಉಮೇಶ್, ಡಾ.ಭಾರತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net