

ಕೋಟ: ವಡ್ಡರ್ಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕೃಷಿ ಅಧಿಕಾರಿ ರಾಘವೇಂದ್ರ ಪರಿಸರ ಜಾಗೃತಿ ಕುರಿತು ಮಾಹಿತಿ ನೀಡಿದರು. ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಕಾಶ್ ಆಚಾರ್ ಮಧುವನ, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನ ವಲಯ ಮೇಲ್ವಿಚಾರಕರಾದ ರಾಜಶೇಖರ್, ಒಕ್ಕೂಟ ಅಧ್ಯಕ್ಷೆ ವಿಶಾಲ, ಮುಖ್ಯಶಿಕ್ಷಕಿ ಗಿರಿಜಾ ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ರಾಜಶೇಖರ್ ನಿರೂಪಿಸಿದರು. ಸೇವಾ ಪ್ರತಿನಿಧಿ ಲಕ್ಷ್ಮೀ ದೇವಾಡಿಗ ಸ್ವಾಗತಿಸಿದರು. ವಿದ್ಯಾಲತಾ ವಂದಿಸಿದರು.