ಸೂರಂಬೈಲು ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ

parisara
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಮತ್ತು ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ನಡೆದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮಕ್ಕೆ ಸದಾಶಿವ ರೈ ಗಿಡನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Published on

ಪುತ್ತೂರು ಗ್ರಾಮಾಂತರ: ಪುತ್ತೂರು ತಾಲೂಕು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಬೆಟ್ಟಂಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಭಾನುವಾರ ಪಾಣಾಜೆ ಗ್ರಾಮದ ಸೂರಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಂಪಾಡಿ ವಲಯದ ನಿಕಟಪೂರ್ವ ಅಧ್ಯಕ್ಷ ಸದಾಶಿವ ರೈ ಗಿಡನಾಟಿ ಮಾಡುವ ಮೂಲಕ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕ ಶಿವಕುಮಾರ್ ಮತ್ತು ಸೂರಂಬೈಲು ಶಾಲೆಯ ಮುಖ್ಯ ಶಿಕ್ಷಕ ನಾಗೇಶ್ ಪರಿಸರ ಮಾಹಿತಿ ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸುನಿತಾ, ಶೌರ್ಯ ಕಾರ್ಯಕ್ರಮದ ಪ್ರತಿನಿಧಿ ಸುಬ್ರಹ್ಮಣ್ಯ, ಕೃಷಿ ಮೇಲ್ವಿಚಾರಕ ಶಿವರಂಜನ್, ಯೋಜನೆಯ ವಲಯ ಮೇಲ್ವಿಚಾರಕ ಸೋಹಾನ್ ಮತ್ತಿತರರು ಉಪಸ್ಥಿತರಿದ್ದರು.

ಯೋಜನೆಯ ಸೇವಾ ಪ್ರತಿನಿಧಿ ಪದ್ಮಾವತಿ ಸ್ವಾಗತಿಸಿದರು. ಜಯಶ್ರೀ ವಂದಿಸಿದರು. ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net