

ಕೊಕ್ಕರ್ಣೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಂದಾರ್ತಿ ದುರ್ಗಾಪರಮೇಶ್ವರಿ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಮಂದಾರ್ತಿ ವಲಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಆಯೋಜಿಸಲಾಯಿತು. ನಮಸ್ತೆ ಭಾರತ್ ಟ್ರಸ್ಟ ಅಧ್ಯಕ್ಷ ಪ್ರಮೋದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ. ಶುಭಹಾರೈಸಿದರು. ಸಖಾರಾಮ್ ಸೋಮಯಾಜಿ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷ ಕರುಣಾಕರ್, ಶೌರ್ಯ ವಿಪತ್ತು ತಂಡದ ಪ್ರತಿನಿಧಿ ಮಂಜುನಾಥ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಸಚಿನ್ ಕುಮಾರ್ ಸ್ವಾಗತಿಸಿದರು. ತಾಲೂಕು ಕೃಷಿ ಮೇಲ್ವಿಚಾರಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಸ್ಥಳಿಯ ಒಕ್ಕೂಟದ ಪದಾಧಿಕಾರಿಗಳು, ಶಿಕ್ಷಕರು, ಶೌರ್ಯ ವಿಪತ್ತು ತಂಡದ ಸದಸ್ಯರು, ಸೇವಾ ಪ್ರತಿನಿಧಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.