ವಿದ್ಯಾರ್ಥಿಗಳಿಂದ ಪರಿಸರ ವೀಕ್ಷಣೆ

16sunti01
ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್‌ಬುಲ್ ದಳಗಳ ವಿದ್ಯಾರ್ಥಿಗಳು ಸಾಹಸ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವುದು. 2: ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡುತ್ತಿರುವುದು.
Published on

ಸುಂಟಿಕೊಪ್ಪ: ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್ ಹಾಗೂ ಬುಲ್‌ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಘಟಕರಾದ ದಮಯಂತಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಅದೇ ರೀತಿಯಲ್ಲಿ ಸಮಾಜದಲ್ಲಿ ಸಂಕಷ್ಟದಲ್ಲಿರುವ ಜನತೆಗೆ ನೆರವಾಗುವ ಮೂಲಕ ಸೇವಾ ಮನೋಭಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡಿದರು. ನಂತರ 4 ದಳಗಳ ಸದಸ್ಯರು ಪರಿಸರ ವೀಕ್ಷಣೆ, ಸಾಹಸ ಕ್ರೀಡೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ವೀರಾ ಡಿಸೋಜ, ಗೈಡ್ಸ್‌ನ ಶಿಕ್ಷಕಿ ಪ್ರೀತಿ ಜಾಯ್ಸ ಡಿಕುನ್ನಾ, ಸ್ಕೌಟ್ಸ್ ಮಹೇಶ್, ಕಬ್ಸ್, ಬುಲ್ ಬುಲ್ ದಳದ ಶಿಕ್ಷಕಿ ಯೀವಾ ಬೆನ್ನಿಸ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net