ಮಕ್ಕಳ ಕುಂಚದಿಂದ ಮೂಡಿಬಂದ ಪರಿಸರ ಚಿತ್ರಗಳು

chithrakale
Published on

ಮಡಿಕೇರಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಸುಮಾರು ೧೬೦ ಕ್ಕಿಂತಲೂ ಹೆಚ್ಚಿನ ಮಕ್ಕಳು ಚಿತ್ರಕಲೆ ಸ್ಪರ್ಧೆ ಮತ್ತು ೩೦ ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.


ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಮಕ್ಕಳು ಕೂಡ ಅತಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದು ಗಮನ ಸೆಳೆಯಿತು.


ಪರಿಸರ ನಾಶ, ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಅರಣ್ಯ ನಾಶ, ಮನುಷ್ಯನಿಂದ ಜೀವ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು, ನೆಲ-ಜಲ, ಅರಣ್ಯ, ಜೀವ ವೈವಿಧ್ಯ ಹಾಗೂ ಪರಿಸರದ ವಿವಿಧ ಪ್ರಕಾರಗಳ ಕುರಿತು ಮಕ್ಕಳ ಕುಂಚಗಳಲ್ಲಿ ಮೂಡಿ ಬಂದಿದ್ದು ಪರಿಸರ ಪ್ರಿಯರ್ಗಮನ ಸೆಳೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net