ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಕಾಳಜಿ

Mbd_Environment
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ ಎಂದು ಮೂಡುಬಿದಿರೆ ಜೈನಮಠದ ಡಾ.ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಎನರ್ಜಿ ಮತ್ತು ವೆಟ್ ಲಾಂಡ್ಸ್ ರಿಸರ್ಚ್ ಗ್ರೂಪ್ ಆಶ್ರಯದಲ್ಲಿ ವಿದ್ಯಾಗಿರಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 4 ದಿನಗಳ ಲೇಕ್ ಅಂತಾರಾಷ್ಟ್ರೀಯ ದ್ವೈವಾರ್ಷಿಕ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕೆರೆಯನ್ನು ಪುನಃಶ್ಚೇತನಗೊಳಿಸುವ ಹಾಗೂ ರಕ್ಷಿಸುವ ಜವಾಬ್ದಾರಿ ಯುವಜನತೆ ಮೇಲಿದೆ ಎಂದರು.

ಮಂಗಳೂರು ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ಪ್ರೊಚಾನ್ಸಲರ್ ಫಾ.ಮೆಲ್ವಿನ್ ಡಿಕುನ್ಹಾ, ವಿಜ್ಞಾನಿ ಟಿ.ವಿ.ರಾಮಚಂದ್ರ, ಪರಿಸರ ಹೋರಾಟಗಾರ ಎಂ.ಕುಮಾರಸ್ವಾಮಿ, ಕುಮಟಾದ ಐಐಎಸ್ ಸಿಎಂಡಿ ಸುಭಾಷ್‌ಚಂದ್ರನ್, ಎನ್ವಿರಾನ್ಮೆಂಟಲ್ ಸೈನ್ಸ್ ಕಠ್ಮಂಡು ವಿಶ್ವವಿದ್ಯಾಲಯದ ಪ್ರೊ.ಡಾ.ಸುಭೋಧ್ ಶರ್ಮ, ಡಾ.ರಾಜಶೇಖರ್, ಮಣಿಪಾಲ್ ಸ್ಕೂಲ್ ಆಫ್ ಆರ್ಕಿಟೆಕ್ಚರ್‌ನ ಡಾ.ದೀಪಿಕಾ ಶೆಟ್ಟಿ, ಆಳ್ವಾಸ್ ಪದವಿ(ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಗಗನಾ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಡಾ.ಎಸ್.ವಿನಯ್ ವಂದಿಸಿದರು.

524 ಶಾಲಾ ವಿದ್ಯಾರ್ಥಿಗಳು, 82 ಕಾಲೇಜು ವಿದ್ಯಾರ್ಥಿಗಳು, 25 ಸಂಶೋಧಕರು ಮತ್ತು 6 ಶಿಕ್ಷಕರು ಭಾಗವಹಿಸಿದ್ದರು. ಕ್ಷೇತ್ರ ದತ್ತಾಂಶ ಸಂಗ್ರಹಣೆ, ವ್ಯಾಖ್ಯಾನ ಮತ್ತು ದತ್ತಾಂಶ ಮತ್ತು ಪ್ರಸ್ತುತಿಯ ಸಂಶ್ಲೇಷಣೆಯೊಂದಿಗೆ ತಮ್ಮ ಸಂಶೋಧನೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸಹ್ಯಾದ್ರಿ ಯುವ ಪರಿಸರಶಾಸ್ತ್ರಜ್ಞರನ್ನು ಪುರಸ್ಕರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net