ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

11 sgr 2
ತುಮರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಸಾಗರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ. ಉದ್ಘಾಟಿಸಿದರು. ಓಂಕಾರ ಜೈನ್, ಜಿ.ಟಿ.ಸತ್ಯನಾರಾಯಣ, ಪ್ರೇಮಲತಾ, ಶ್ರೀದೇವಿ, ಭೋಗರಾಜ್ ಇತರರಿದ್ದರು.
Published on

ಬ್ಯಾಕೋಡು: ಪರಿಸರವನ್ನು ನಾವು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ತುಮರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಜಯಾ ನಾಯಕ್ ಹೇಳಿದರು.

ತುಮರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ವನಮಹೋತ್ಸವ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಪರಿಸರವನ್ನು ವಿವಿಧ ಕಾರಣಗಳಿಂದ ನಾವು ಹಾಳು ಮಾಡುತ್ತಿದ್ದೇವೆ. ಅದರ ದುಷ್ಪರಿಣಾಮದಿಂದಾಗಿ ಪ್ರಾಕೃತಿಕ ವಿಕೋಪ, ಪ್ರವಾಹ, ಬರಗಾಲವನ್ನು ಎದುರಿಸುವಂತಾಗಿದೆ. ಜನ ಜಾಗೃತರಾಗಿ ಅರಣ್ಯವನ್ನು ಉಳಿಸಿ ಬೆಳೆಸಬೇಕು ಎಂದು ತಿಳಿಸಿದರು.
ಗಿಡಕ್ಕೆ ನೀರೆರೆದು ವನಮಹೋತ್ಸವಕ್ಕೆ ಚಾಲನೆ ನೀಡಿದ ಪ್ರಾಚಾರ್ಯ ಕೆ.ಸಿ.ಸತ್ಯನಾರಾಯಣ ಮಾತನಾಡಿ, ಪರಿಸರ ಸಂರಕ್ಷಣೆ ನಿರಂತರವಾಗಿರಲಿ. ಜತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಚಟುವಟಿಕೆಯ ಜತೆಗೆ ಫಲಿತಾಂಶದಲ್ಲೂ ಸಾಧನೆ ಮಾಡಿದ್ದು ಪ್ರಶಂಸನೀಯ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಓಂಕಾರ ಜೈನ್, ತುಮರಿ ಗ್ರಾಪಂ ಮಾಜಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ ಮಾತನಾಡಿದರು. ಬರೂರು ಕಾಲೇಜಿನ ಪ್ರಾಚಾರ್ಯೆ ಪ್ರೇಮಲತಾ, ತುಮರಿ ಗ್ರಾಪಂ ಅಧ್ಯಕ್ಷೆ ಶ್ರೀದೇವಿ ರಾಮಚಂದ್ರ, ಪಿಡಿಒ ಭೋಗರಾಜ್, ಸುಧಾಕರ, ಸಂಧ್ಯಾ, ರಾಮು ಕರೂರು, ಸಿಂಚನಾ, ಸ್ವಾತಿ, ಲಿಖಿತಾ, ಸುಮನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net