ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

IMG-20250214-WA0220
ಭೇರ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಪರಿಸರ ಸಂರಕ್ಷಣಾ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on

ಸಾಲಿಗ್ರಾಮ: ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಾಸನ ಸ್ವಚ್ಛ ಭಾರತ್ ಪರಿಸರವಾದಿ ಚಂದ್ರಶೇಖರ್ ತಿಳಿಸಿದರು.

ಸಾಲಿಗ್ರಾಮ ತಾಲೂಕಿನ ಭೇರ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಟುಂಬದಲ್ಲಿ ಸದಸ್ಯರು ದೀರ್ಘಕಾಲ ಆರೋಗ್ಯವಂತರಾಗಿ ಬದುಕಲು ಉತ್ತಮ ಪರಿಸರ, ಶುದ್ಧ ಕುಡಿಯುವ ನೀರು, ಗಾಳಿ ಮತ್ತು ಶುಚಿತ್ವ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ವೈದ್ಯರ ಸಹಾಯ ಇಲ್ಲದೆ ಆರೋಗ್ಯವಂತರಾಗಿ ಬದುಕಲು ಇಂತಹ ಅಂಶಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ರಾಸಾಯನಿಕಮುಕ್ತ ಆಹಾರ ಸೇವನೆ ಮಾಡಬೇಕು ಎಂದು ಸಲಹೆ ನೀಡಿದರು.

ಮುಖ್ಯಶಿಕ್ಷಕ ಶಿವಪ್ಪನಾಯಕ ಮಾತನಾಡಿ, ಶಾಲೆಯಲ್ಲಿ ಆಯೋಜಿಸುವ ಕಾರ್ಯಕ್ರಮಗಳಿಗೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ದೊರೆಯುತ್ತದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ತಿಳಿಯುತ್ತದೆ. ಶಿಕ್ಷಕರೊಂದಿಗೆ ಪಾಲಕರು ಸಹಕರಿಸಿದರೆ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕೃತಿ ಕಲಿಸಲು ಅನುಕೂಲವಾಗುತ್ತದೆ ಎಂದರು.

ಇಕೋ ಕ್ಲಬ್ ಕಾರ್ಯಕ್ರಮ ಆಯೋಜಕಿ ಅಸ್ಮಿಯಾ, ಶಿಕ್ಷಕರಾದ ಕಾವ್ಯಶ್ರೀ, ಪುಷ್ಪಲತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net