ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ; ಸಿಇಒ ರಿಷಿ ಆನಂದ

ZP ENVIRANMENT DAY
ವಿಜಯಪುರ ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ ವಿಶ್ವ ಪರಿಸರ ದಿನದಂಗವಾಗಿ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮಕ್ಕೆ ಸಿಇಒ ರಿಷಿ ಆನಂದ ಚಾಲನೆ ನೀಡಿದರು. ನಿಂಗಪ್ಪ ಗೋಠೆ, ಬಿ.ಎಸ್. ಮೂಗನೂರಮಠ, ಸಿ.ಆರ್. ಮುಂಡರಗಿ ಮತ್ತಿತರರಿದ್ದಾರೆ.
Published on

ವಿಜಯಪುರ: ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ ಬುಧವಾರ ವಿಶ್ವ ಪರಿಸರ ದಿನದಂಗವಾಗಿ ಅರಣ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಕೃತಿಕ ಸಂಪನ್ಮೂಲವನ್ನು ನಮಗೆ ಅವಶ್ಯಕತೆ ಇದ್ದಷ್ಟು ಮಾತ್ರ ಉಪಯೋಗಿಸೋಣ, ಅವಶ್ಯಕತೆಗಿಂತ ಹೆಚ್ಚು ಉಪಯೋಗ ಮಾಡದೇ ನಮ್ಮ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಸಿಲಿನ ತಾಪಮಾನ ಇರುವುದರಿಂದ ಸಸಿಗಳನ್ನು ನೆಡುವುದು ಹಾಗೂ ಜಲ ಸಂರಕ್ಷಣೆ ಮಾಡುವುದು ಅವಶ್ಯಕವಾಗಿದೆ. ಜಲಸಂರಕ್ಷಣೆಗೆ ಅತ್ಯಂತ ಸೂಕ್ತ ವಿಧಾನ ಮಳೆನೀರು ಕೊಯ್ಲು. ಈ ವಿಧಾನವನ್ನು ನಾವು ಅಳವಡಿಸಿಕೊಂಡು ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.

ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಯೋಜನಾ ನಿರ್ದೇಶಕ ಸಿ.ಆರ್. ಮುಂಡರಗಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬು ಚವಾಣ್, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ.ಬಿ. ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net