

ವಿಜಯವಾಣಿ ಸುದ್ದಿಜಾಲ ಉಳ್ಳಾಲ
ಯಾವುದೇ ಸ್ಪರ್ಧೆಯಲ್ಲಿ ಸೋಲು-ಗೆಲುವಿನ ಕೀಳರಿಮೆಯಿಲ್ಲ, ಸ್ಪರ್ಧೆಯಲ್ಲಿ ಎಲ್ಲರೂ ಗೆಲ್ಲಲಾಗದು, ಸ್ಪರ್ಧಾಳುಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋತವರು ಮುಂದಿನ ಪಂದ್ಯದಲ್ಲಿ ಗೆಲ್ಲಲು ಸಜ್ಜಾಗಬೇಕು ಎಂದು ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಭಿಪ್ರಾಯಪಟ್ಟರು.
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಮತ್ತು ಮೇಲಂಗಡಿ ಸರ್ಕಾರಿ ಉರ್ದು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರಸಭೆ ಮೈದಾನದಲ್ಲಿ ನಡೆದ ಉಳ್ಳಾಲ ವಲಯ ಪ್ರೌಢಶಾಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಉರ್ದು ಶಾಲೆಯ ವಿದ್ಯಾರ್ಥಿ ಚಿರಾಗ್ ಎಸ್.ಉಳ್ಳಾಲ್ ಅವರನ್ನು ಅಭಿನಂದಿಸಲಾಯಿತು.
ರಾಜ್ಯ ಮಿತ್ರ ಮತ್ತು ಆರೋಗ್ಯ ರಕ್ಷಣಾ ಮಂಡಳಿ ಅಧ್ಯಕ್ಷ ಡಾ.ಯು.ಟಿ. ಇಫ್ತಿಕಾರ್ ಫರೀದ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಉಳ್ಳಾಲ ನಗರಸಭಾ ಅಧ್ಯಕ್ಷೆ ಶಶಿಕಲಾ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುಸ್ತಫಾ ಅಬ್ದುಲ್ಲಾ, ಉಳ್ಳಾಲ ನಗರಸಭೆ ಪೌರಾಯುಕ್ತ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್, ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷ ಯು.ಪಿ.ಅಯೂಬ್ ಮಂಚಿಲ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮೈಸೂರು ವಿಭಾಗೀಯ ಕಾರ್ಯದರ್ಶಿ ತ್ಯಾಗಂ ಹರೇಕಳ, ಪ್ರೌಢಶಾಲಾ ಶಿಕ್ಷಕರ ಸಂಘದ ಮಂಗಳೂರು ತಾಲೂಕು ಅಧ್ಯಕ್ಷೆ ಜಯವಂತಿ ಸೋನ್ಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮಂಗಳೂರು ವಲಯ ಪ್ರಧಾನ ಕಾರ್ಯದರ್ಶಿ ಮೋಹನ್ ಶಿರ್ಲಾಲ್, ನೋಡೆಲ್ ಅಧಿಕಾರಿ ರಾಜೀವ ನಾಯಕ್, ವಲಯ ಸಿಆರ್‌ಪಿ ಮೋಹನ್, ಹಝ್ರತ್ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಸೂಲ್ ಖಾನ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಇಮ್ತಿಯಾಜ್, ಟಿಪ್ಪು ಸುಲ್ತಾನ್ ಕಾಲೇಜಿನ ಪ್ರಾಂಶುಪಾಲೆ ಪವಿತ್ರ, ಸಹಶಿಕ್ಷಕರ ಸಂಘದ ಅಧ್ಯಕ್ಷೆ ಅನಿತಾ, ಸೋಮೇಶ್ವರ ಪುರಸಭೆ ಸದಸ್ಯ ಪುರುಷೋತ್ತಮ ಶೆಟ್ಟಿ, ನಗರಸಭೆ ಮಾಜಿ ಸದಸ್ಯರಾದ ಉಸ್ಮಾನ್ ಕಲ್ಲಾಪು, ಭಗವನ್ ದಾಸ್, ಪ್ರಮುಖರಾದ ಆಲಿಮೋನು, ಮನ್ಸೂರ್ ಮಂಚಿಲ, ಕ್ರೀಡಾ ಸಮಿತಿ ಸದಸ್ಯರಾದ ಹಮೀದ್ ಕೋಡಿ, ಅಬ್ದುಲ್ ರಹ್ಮಾನ್, ರಶೀದ್ ಕೋಡಿ, ಸದಕತ್ ಕೋಡಿ, ಅಶ್ರಫ್ ಕೋಡಿ, ಮೊಯಿದ್ದೀನ್ ಮೇಲಂಗಡಿ, ಮಲಿಕ್ ಅಮೀರ್ ಮೇಲಂಗಡಿ ಮೊದಲಾದವರು ಉಪಸ್ಥಿತರಿದ್ದರು. ಉರ್ದು ಶಾಲೆ ಮುಖ್ಯಶಿಕ್ಷಕ ರಾಜೇಶ್ ಸ್ವಾಗತಿಸಿದರು. ಶಿಕ್ಷಕಿ ವೀಣಾ ವಂದಿಸಿದರು. ಸಹಶಿಕ್ಷಕಿ ಸೌಮ್ಯ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.
ಇಲಾಖೆಯು ಉಳ್ಳಾಲದ ಯಾವುದೇ ಶಾಲೆಗೆ ಕ್ರೀಡಾಕೂಟದ ಅವಕಾಶ ಕೊಟ್ಟರೆ ದೈಹಿಕ ಶಿಕ್ಷಣ ಶಿಕ್ಷಕರು ರಾಜ್ಯಮಟ್ಟದ ವ್ಯವಸ್ಥೆ ಮಾಡುತ್ತಾ ಬಂದಿದ್ದಾರೆ. ಉರ್ದು ಶಾಲಾಭಿವೃದ್ಧಿ ಸಮಿತಿ ತಂಡವಾಗಿ ಕಾರ್ಯನಿರ್ವಹಿಸಿ ರಾಜ್ಯಮಟ್ಟದ ಪಂದ್ಯಾಟ ನೋಡುವ ಅವಕಾಶ ಕಲ್ಪಿಸಿದೆ ಎಂದು ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆಎಂಕೆ ಮಂಜನಾಡಿ ಶ್ಲಾಘಿಸಿದರು.