ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

241020 Gangavati KVS Protest
ಹೊಸ ಶಿಕ್ಷಣ ನೀತಿ ಕೈಬಿಟ್ಟು ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಾಲೂಕು ಸಮಿತಿ ಸದಸ್ಯರು ಗಂಗಾವತಿ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
Published on

ಗಂಗಾವತಿ: ಹೊಸ ಶಿಕ್ಷಣ ನೀತಿ ಕೈಬಿಟ್ಟು ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ತಾಲೂಕು ಸಮಿತಿ ಸದಸ್ಯರು ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ಉಪತಹಸೀಲ್ದಾರ್ ಮಂಜುನಾಥ ನಂದನ್‌ರಿಗೆ ಮನವಿ ಸಲ್ಲಿಸಿದರು.

ಸಮಿತಿ ಸಂಚಾಲಕ ಗುರುಬಸವ ಬರಗೂರು ಮಾತನಾಡಿ, ಹೊಸ ಶಿಕ್ಷಣ ನೀತಿಯಿಂದ ಲಾಭಕ್ಕಿಂತ ದುರ್ಬಳಕೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿ ಸಂಘಟನೆಗಳೊಂದಿಗೆ ಚರ್ಚಿಸದೇ ಜಾರಿಗೊಳಿಸಲೆತ್ನಿಸುತ್ತಿರುವುದು ಸರಿಯಲ್ಲ. ಖಾಸಗಿ ಮತ್ತು ವಿದೇಶಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ನೀತಿ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರದೊಂದಿಗೆ ಚರ್ಚೆ ನಡೆಸದ ಯುಜಿಸಿ ಕೇಂದ್ರ ಸರ್ಕಾರದ ಸೂಚನೆಯಂತೆ ಕಾಯ್ದೆ ಜಾರಿಗೊಳಿಸುತ್ತಿದೆ. ಸರ್ಕಾರದಿಂದ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಬೇಕಿದ್ದು, ಕೇಂದ್ರ ಸರ್ಕಾರದ ಸರ್ವಾಧಿಕಾರ ಧೋರಣೆ ನಿಲ್ಲಲಿ ಎಂದರು. ಪದಾಧಿಕಾರಿಗಳಾದ ಮರಿಸ್ವಾಮಿ, ಸುನೀಲ್ ಜೋಶಿ, ದುರುಗಪ್ಪ, ತಿಮ್ಮರಾಜು, ಸಲೀಂ, ರಾಜಶೇಖರ್ ಅಂಗಡಿ, ನಾಗರಾಜ್ ಮೈತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net