ಬಜೆಟ್‌ನಲ್ಲಿ ಎಲ್ಲ ಸಮುದಾಯಕ್ಕೂ ಸಮಪಾಲು

ಭಾರತೀನಗರದ ಚಾಂಶುಗರ್ಸ್‌ ಕಾರ್ಖಾನೆಯ ಅತಿಥಿಗೃಹದಲ್ಲಿ ಮನ್ಮುಲ್ ನಿರ್ದೇಶಕ ಹರೀಶ್ ಬಾಬು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಅಭಿನಂದಿಸಿದರು.
ಭಾರತೀನಗರದ ಚಾಂಶುಗರ್ಸ್‌ ಕಾರ್ಖಾನೆಯ ಅತಿಥಿಗೃಹದಲ್ಲಿ ಮನ್ಮುಲ್ ನಿರ್ದೇಶಕ ಹರೀಶ್ ಬಾಬು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಅಭಿನಂದಿಸಿದರು.
Published on

ಕೆ.ಎಂ.ದೊಡ್ಡಿ: ಮುಸ್ಲಿಮರು ಸೇರಿದಂತೆ ಎಲ್ಲ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಇಲ್ಲಿನ ಚಾಂಶುಗರ್ಸ್‌ ಅತಿಥಿಗೃಹದಲ್ಲಿ ಮನ್ಮುಲ್ ನಿರ್ದೇಶಕ ಹರೀಶ್ ಬಾಬು ಅವರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಓಲೈಕೆಗಾಗಿ ಬಜೆಟ್‌ನಲ್ಲಿ ಹೆಚ್ಚು ಆದ್ಯತೆ ನೀಡಿದ್ದಾರೆಂಬ ಬಿಜೆಪಿಯವರ ಟೀಕೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಯನ್ನು ಎಲ್ಲ ಸಮುದಾಯಕ್ಕೂ ನೀಡುತ್ತಿಲ್ಲವೆ ಎಂದು ತಿರುಗೇಟು ನೀಡಿದರು.

ವಿದ್ಯಾಭ್ಯಾಸದಲ್ಲಿ ಹಿಂದುಳಿದ ಸಮುದಾಯದ ಮಕ್ಕಳ ವಿದ್ಯಾಭ್ಯಾಸಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಲಾಗಿದೆ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಸಮರ್ಥಿಸಿಕೊಂಡರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಯಾವುದೇ ಬಂಡವಾಳವಿಲ್ಲ. ಅಲ್ಲದೆ ವಿಜಯೇಂದ್ರರಿಗೆ ಸರ್ಕಾರವನ್ನು ಟೀಕಿಸಲು ಯಾವುದೇ ವಿಷಯಗಳಿಲ್ಲ. ಹಿಂದುಗಳ ಬಗ್ಗೆ ಮಾತನಾಡಿದರೆ ಗ್ರಾಮೀಣ ಪ್ರದೇಶದ ಮುಗ್ದರನ್ನು ಸೆಳೆಯಬಹುದು ಎಂದುಕೊಂಡಿದ್ದಾರೆ. ಇದು ವರ್ಕೌಟ್ ಆಗಲ್ಲ ಎಂದು ವ್ಯಂಗ್ಯವಾಡಿದರು.

ಮುಂದಿನ ಬಾರಿಯೂ ನಮ್ಮ ತಂದೆ ಬಜೆಟ್ ಮಂಡಿಸುತ್ತಾರೆಂಬ ಯತೀಂದ್ರ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಅವರಿಗೆ ಸಾಲ ಎಷ್ಟು ತೆಗೆದುಕೊಳ್ಳಬೇಕು, ಯಾವುದಕ್ಕೆ ಎಷ್ಟು ಹಣ ನೀಡಬೇಕು ಎಂಬುದೂ ತಿಳಿದಿದೆ. ಬೇರೆಯವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಹೇಳಿದರು.

ಶಾಸಕ ಕದಲೂರು ಉದಯ್, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರನ್ನು ಮನ್ಮುಲ್ ನಿರ್ದೇಶಕ ಹರೀಶ್‌ಬಾಬು ಅಭಿನಂಧಿಸಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗೀಗೌಡ, ಮೈಷುಗರ್ಸ್‌ ಅಧ್ಯಕ್ಷ ಸಿ.ಡಿ. ಗಂಗಾಧರ್, ನಿರ್ದೇಶಕ ಪಿ. ಸಂದರ್ಶ, ಬ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ದೇವರಹಳ್ಳಿ ದೊಡ್ಡೇಗೌಡ, ತೊರೆಬೊಮ್ಮನಹಳ್ಳಿ ವೆಂಕಟೇಶ್, ಕದಲೂರು ತಿಮ್ಮೇಗೌಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net