ಅಕ್ಷರ ಕ್ರಾಂತಿಯಿಂದ ಸಮಾನತೆ ಸಾಧ್ಯ

23 KUDGALI 01
ಕೂಡ್ಲಿಗಿ ತಾಲೂಕಿನ ಬಣವಿಕಲ್ಲಿನಲ್ಲಿ ಹಮ್ಮಿಕೊಂಡಿದ್ದ ಅಸ್ಪಶ್ಯತೆ ನಿವಾರಣಾ ಸಪ್ತಾಹ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಎಸ್.ಫಕ್ಕೀರಪ್ಪ ಮಾತನಾಡಿದರು. ಸಹಾಯಕ ನಿರ್ದೇಶಕಿ ಶಾಹೀಖಾ ಅಹ್ಮದಿ, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ ಲೋಕೇಶ, ಉಪಾಧ್ಯಕ್ಷೆ ಪೂರ್ಣಿಮಾ ಪ್ರಶಾಂತ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಗುಣಸಾಗರ ಕೃಷ್ಣಪ್ಪ ಇತರರಿದ್ದರು.
Published on

ಕೂಡ್ಲಿಗಿ: ಅಕ್ಷರ ಕ್ರಾಂತಿಯಿಂದ ಮಾತ್ರ ಅಸ್ಪಶ್ಯತೆ ನಿವಾರಣೆ ಸಾಧ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಧೀಕ್ಷಕ ಎಸ್.ಫಕ್ಕೀರಪ್ಪ ಹೇಳಿದರು.

ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಸ್ಪಶ್ಯತೆ ನಿವಾರಣಾ ಸಪ್ತಾಹದ ಅಂಗವಾಗಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಸ್ಪಶ್ಯತೆ ಹೋಗಲಾಡಿಸುವುದು ಪ್ರತಿಯೊಬ್ಬರ ಕರ್ತವ್ಯ. ಸಾಮಾಜಿಕ ಬದಲಾವಣೆಯಿಂದ ಇದನ್ನು ಸರಿಪಡಿಸಬೇಕಿದೆ. ಸಮಾಜದ ಎಲ್ಲಾ ವರ್ಗದವರು ಶಿಕ್ಷಣವಂತರಾದರೆ ಸಮಾನತೆಯ ಸಮಾಜ ಸ್ಥಾಪಿಸುವುದರ ಜತೆ ಅಸ್ಪಶ್ಯತೆ ನಿವಾರಿಸಬಹುದು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶೋಷಿತ ಸಮಾಜದ ಧ್ವನಿಯಾಗಿದ್ದರು. 12ನೇ ಶತಮಾನದಲ್ಲಿ ಬಸವಣ್ಣ ಅವರು ಮಹಿಳಾ ಸಮಾನತೆ ಹಾಗೂ ಜಾತಿ ಪದ್ಧತಿ ವಿರುದ್ಧ ಹೋರಾಡಿದರು. ಸಾಮಾಜಿಕ ಅಸಮತೋಲನ ಹೋಗಲಾಡಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ದಲಿತ ಮುಖಂಡ ಬಿ.ರಾಘವೇಂದ್ರ, ಉಪ ತಹಸೀಲ್ದಾರ್ ಚಂದ್ರಮೋಹನ್, ಶಿಕ್ಷಕಿ ಗೀತಾ ಭಾಪ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net