ಸಮಾನತೆಯನ್ನು ಪ್ರತಿಪಾದಿಸಿದ್ದ ರೇಣುಕಾಚಾರ್ಯರು

05-03-Shiva-1
Published on

ರಾಯಚೂರು: ಸ್ವಾರ್ಥ ಬಿಟ್ಟು ಬದುಕು ನಡೆಸಿದಾಗ ಜೀವನ ಸಾರ್ಥಕವಾಗಲಿದೆ. ಸಮಾಜಕ್ಕೆ ನಾವು ಒಳ್ಳೆಯದನ್ನು ಮಾಡಿದಾಗ ನಮಗೂ ಒಳ್ಳೆಯದಾಗಲಿದೆ ಎನ್ನುವುದನ್ನು ಅರಿತುಕೊಳ್ಳಬೇಕು ಎಂದು ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು. ಸಮಾಜಕ್ಕೆ ಧರ್ಮದ ಹಿನ್ನೆಲೆಯನ್ನು ನೀಡಿ ಸಮಾನತೆಯನ್ನು ರೇಣುಕಾಚಾರ್ಯರು ಪ್ರತಿಪಾದಿಸಿದ್ದರು. ಮಕ್ಕಳಲ್ಲಿ ಒಳ್ಳೆಯ ಸಂಸ್ಕೃತಿ ಬೆಳೆಸಿದಾಗ ಅವರು ಸುಸಂಸ್ಕೃತರಾಗಲು ಸಾಧ್ಯ. ಈ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದ ನೆಲೆಸಲು ಸಾಧ್ಯ. ರೇಣುಕಾಚಾರ್ಯರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುಂದೆ ಸಾಗಬೇಕು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net