

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಮಾಜದಲ್ಲಿ ವಿಕಲಚೇತನರನ್ನು ಮತ್ತು ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಜತೆಗೆ ಅವರನ್ನು ಗೌರವಯುತವಾಗಿ ಬದುಕು ನಡೆಸಲು ನಾವೆಲ್ಲರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಹೇಳಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಅಲಿಂಕೋ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಕಲಚೇತನರಲ್ಲಿ ತನ್ನದೇ ಅದ ವಿಶಿಷ್ಟ ಕಲೆ, ಶಕ್ತಿ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾನತೆ, ಗೌರವಯುತವಾಗಿ ನೋಡಬೇಕು. ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು. ಅಲಿಂಕೊ ಸಂಸ್ಥೆಯು ಉತ್ತಮ ಕೆಲಸ ಮಾಡಿದ್ದು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಅಭಿನಂದಿಸಿದರು.
64 ಲಕ್ಷ ರೂ.ಮೌಲ್ಯದ ಸಲಕರಣೆ:149 ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸಿಎಸ್‌ಆರ್ ಅನುದಾನದಲ್ಲಿ 44.71ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆ ವಿತರಣೆ ಮತ್ತು 161 ವಿಕಲಚೇತನರಿಗೆ ಅಡ್ಿ ಯೋಜನೆಯಡಿ 12.55 ಲಕ್ಷ ರೂ.ಮೌಲ್ಯದ ಸಾಧನ ಸಲಕರಣೆ ವಿತರಣೆ ಹಾಗೂ 83 ಹಿರಿಯ ನಾಗರಿಕರಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 6.88 ಲಕ್ಷ ರೂ.ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದ್ದು 393 ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ರೂ.ಮೌಲ್ಯದ ವೀಲ್‌ಚೇರ್, ಯಂತ್ರಚಾಲಿತ ವೀಲ್ ಚೇರ್, ಕ್ರಚರ್ಸ್, ಕ್ಯಾಲಿಪರ್ಸ್ ವಾಕರ್, ಶ್ರವಣ ಸಾಧನ ಹಾಗೂ ಇತರೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗಿದೆ ಎಂದು ಎಡಿಸಿ ಮಾಹಿತಿ ನೀಡಿದರು.
ಸಹಕಾರ ಮುಖ್ಯ: ಸಮಾಜದಲ್ಲಿ ವಿಕಲಚೇತನರನ್ನು ಮತ್ತು ಹಿರಿಯ ನಾಗರಿಕರ ವಿಷಯದಲ್ಲಿ ಎಲ್ಲರೂ ಸಹಕಾರ ನೀಡಬೇಕು, ಅವರಲ್ಲಿ ಜೀವನೋತ್ಸಹ ತುಂಬುವ ಕೆಲಸ ಮಾಡಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ ಹೇಳಿದರು. ಸರ್ಕಾರ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ ಅವುಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಇದರ ಜತೆಗೆ ಸಿಎಸ್‌ಆರ್ ಅನುದಾನದಡಿ ದೊರಕುವ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.