ಅಪೌಷ್ಟಿಕತೆಯನ್ನು ನಿರ್ಮೂಲನೆಗೊಳಿಸಿ, ಆರೋಗ್ಯಕರ ಸಮಾಜ ನಿರ್ಮಿಸಲು ಕರೆ

9CBP2a.jpg
Published on

ಚಿಕ್ಕಬಳ್ಳಾಪುರ: ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ನಿರ್ಮೂಲನೆಗೊಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್ ಸಲಹೆ ನೀಡಿದರು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗಳಿಗಾಗಿ ಕೈಗೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
6 ವರ್ಷದೊಳಗಿನ ಮಕ್ಕಳಿಗೆ ಸಾಂಸ್ಥಿಕ ಹಾಗೂ ಸಮುದಾಯ ಮಟ್ಟದಲ್ಲಿ ಅಪೌಷ್ಟಿಕತೆ ನಿವಾರಣೆಗಾಗಿ ಆರೈಕೆ ಮತ್ತು ಚಿಕಿತ್ಸೆ, ಪೌಷ್ಟಿಕ ಪುನಶ್ಚೇತನ ಹಾಗೂ ಸಾರ್ವಜನಿಕ ಆರೋಗ್ಯ ಸೇವೆಗಳನ್ನು ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳ ಸೇವೆಗಳೊಂದಿಗೆ ಬಲಪಡಿಸಬೇಕು ಎಂದರು.
ಮಕ್ಕಳಲ್ಲಿನ ಸಾಧಾರಣ ಹಾಗೂ ತೀವ್ರ ಅಪೌಷ್ಟಿಕತೆಯನ್ನು ತ್ವರಿತವಾಗಿ ಗುರುತಿಸಿ, ತಕ್ಷಣ ಪೌಷ್ಠಿಕ ಪುನಶ್ಚೇತನ ಕೇಂದ್ರಗಳಿಗೆ ಸೇರಿಸಬೇಕು ಎಂದರು.
ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ನಿರ್ದಿಷ್ಟ ವ್ಯಕ್ತಿಗಳಲಿನ್ಲ ರಕ್ತಹೀನತೆಯ ತಪಾಸಣೆ ಹಾಗೂ ನಿರ್ದಿಷ್ಟ ಚಿಕಿತ್ಸೆಯನ್ನು ನೀಡುವುದು, ಮೇಲ್ವಿಚಾರಣೆ, ದಾಖಲಾತಿ ಹಾಗೂ ವರದಿ ಚಟುವಟಿಕೆಯು ಚೈನ್ ಯೋಜನೆಯ ಮುಖ್ಯ ಉದ್ದೇಶ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಸಂತೋಷ್ ಬಾಬು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಹರೀಶ್, ಸಂಪನ್ಮೂಲ ವ್ಯಕ್ತಿ ಡಾ.ರವಿಕುಮಾರ್, ಡಿ.ವೈ.ಡಿ.ಹೆಚ್.ಇ.ಒ ಸುಧಾ, ಜಿಲ್ಲಾ ವ್ಯವಸ್ಥಾಪಕ ರಾಘವೇಂದ್ರ, ಡಿಎನ್‌ಓ ಮೀನಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net