

ದೇವದುರ್ಗ: ಮಾತೋಶ್ರೀ ಮಹಾಂತಮ್ಮ ಶಿವಬಸಪ್ಪ ಗೋನಾಳ ಪ್ರತಿಷ್ಠಾನ ಕೊಡಮಾಡುವ ರಾಜ್ಯ ಮಟ್ಟದ ಮಹಾಂತಶ್ರೀ ಪ್ರಶಸ್ತಿಗೆ ಪಟ್ಟಣದ ಹಗಲುವೇಷ ಕಲಾವಿದ ಈರಣ್ಣ ರುದ್ರಾಕ್ಷಿ ಆಯ್ಕೆಯಾಗಿದ್ದಾರೆ.
ರಾಯಚೂರು ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನ.24ರಂದು ಹಮ್ಮಿಕೊಂಡ ಪ್ರತಿಷ್ಠಾನದ 15ನೇ ವಾರ್ಷಿಕೋತ್ಸವ ಹಾಗೂ ಸಂಗೀತ ಕಾರ್ಯಕ್ರಮದಲ್ಲಿ ಪ್ರಶಿಸ್ತಿ ಪ್ರದಾನ ಮಾಡಲಿದ್ದಾರೆ.
ಜಾನಪದ ಹಗಲುವೇಷ ಕಲಾಸೇವೆ ವಿಭಾಗದಲ್ಲಿ ಪ್ರಶಸ್ತಿ ಒಲಿದುಬಂದಿದೆ. ಇಲಕಲ್‌ನ ಚಿತ್ತರಗಿ ಸಂಸ್ಥಾನದ ಗುರುಮಹಾಂತ ಸ್ವಾಮೀಜಿ, ಕೋಡಂಗಲ್ ಚೌಕಿಮಠದ ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.