

ಚಿತ್ರದುರ್ಗ: ಇತಿಹಾಸ ಪ್ರಸಿದ್ಧ ಜಿಲ್ಲೆ ಚಿತ್ರದುರ್ಗ ಸಾಂಸ್ಕೃತಿಕ ಮತ್ತು ಸಾಹಿತ್ಯಿಕವಾಗಿ ಅತ್ಯಂತ ಶ್ರೀಮಂತವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಎನ್.ಛಲವಾದಿ ಹೇಳಿದರು.
ಮದಕರಿನಾಯಕ ಸಾಂಸ್ಕೃತಿಕ ಕೇಂದ್ರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂ ದಿಗೆ ನಗರದ ತ.ರಾ.ಸು.ರಂಗಮಂದಿರದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಸಂಗೀತೋತ್ಸವ ಉದ್ಘಾಟಿಸಿ ಮಾತನಾಡಿದ ಅವರು,ಸಂಗೀತಕ್ಕೆ ನೋವನ್ನು ಮರೆಸುವ ಶಕ್ತಿಯಿದೆ ಎಂದರು.
ಕುವೆಂಪು ವಿಶ್ವವಿದ್ಯಾನಿಲಯ ಸಹ ಪ್ರಾಧ್ಯಾಪಕ ನೆಲ್ಲಿಕಟ್ಟೆ ಸಿದ್ದೇಶ್ ಮಾತನಾಡಿ,ಸಾಹಿತ್ಯ ಸಂಗೀತಕ್ಕೆ ಅವಿನಾಭಾವ ಸಂಬಂಧವಿದೆ. ಸಾಹಿತ್ಯವನ್ನು ಜೀವಂತವಾಗಿಡುವ ಶಕ್ತಿ ಸಂಗೀತಕ್ಕಿದೆ ಎಂದರು. ವಿದ್ವಾನ್ ತಿಪ್ಪೇಸ್ವಾಮಿ,ಗಾಯಕ ಆಯಿತೋಳು ವಿರುಪಾಕ್ಷಪ್ಪ,ಹೊಸದುರ್ಗದ ಕಲಾವಿದ ಒ.ಮೂರ್ತಿ,ಮದಕರಿನಾಯಕ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ರಾಮಣ್ಣಸ್ವಾಮಿ ಇದ್ದರು.