ಸಚಿವ ಭೈರತಿ ಸುರೇಶ್ ಕ್ಷಮೆಯಾಚನೆಗೆ ಈಶ್ವರಪ್ಪ ಆಗ್ರಹ

K.S. Eshwarappaa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನ ಬಗ್ಗೆ ಸಚಿವ ಭೈರತಿ ಸುರೇಶ್ ಪ್ರಸ್ತಾಪ ಮಾಡಿರುವುದು ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.

ಮೈತ್ರಾದೇವಿ ಅವರ ಸಾವು ಆಕಸ್ಮಿಕ. ಮೈತ್ರಾದೇವಿ ಮತ್ತು ನನ್ನ ಪತ್ನಿ ಜಯಲಕ್ಷ್ಮೀ ಅವರು ಪಾಲುದಾರರಾಗಿ ಕೆಲಸ ಮಾಡಿದ್ದಾರೆ. ಸ್ವಂತ ಅಕ್ಕನ ರೀತಿಯಲ್ಲಿ ಅವರನ್ನು ನೋಡಿದ್ದೇನೆ. ಆದರೆ 25 ವರ್ಷದ ನಂತರ ಅವರ ಸಾವಿನ ಬಗ್ಗೆ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇದು ಅವರ ಮಕ್ಕಳು, ಅದರಲ್ಲೂ ಹೆಣ್ಣು ಮಕ್ಕಳು ಕಣ್ಣೀರು ಹಾಕುವಂತೆ ಮಾಡಿದೆ ಎಂದರು.

ರಾಜಕಾರಣ ಮಾಡಿಕೊಳ್ಳುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಆದರೆ ಮೃತಪಟ್ಟವರ ಹೆಸರಲ್ಲಿ ಟೀಕೆ ಮಾಡುವುದು ಸರಿಯಲ್ಲ. ಸಂಸದೆ ಶೋಭಾ ಕರಂದ್ಲಾಜೆ ಕೂಡ ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿನ ಬಗ್ಗೆ ಹೇಳಿಕೆ ನೀಡಿರುವುದನ್ನೂ ನಾನು ಖಂಡಿಸುವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net