

ಶಿವಮೊಗ್ಗ: ಹಿಂದು ಜಾತಿಗಳ ಜತೆಗೆ ಕ್ರಿಶ್ಚಿಯನ್ ಧರ್ಮದ ಹೆಸರು ಸೇರಿಸಿರುವುದು ಸರಿಯಲ್ಲ. ತಕ್ಷಣವೇ ಅದನ್ನು ತೆಗೆದುಹಾಕಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಜಾತಿ ಪಟ್ಟಿಯಲ್ಲಿ ಅನಧಿಕೃತವಾಗಿ ಸೇರ್ಪಡೆಗೊಂಡಿರುವ 50ಕ್ಕೂ ಅಧಿಕ ಕ್ರಿಶ್ಚಿಯನ್ ಹೆಸರಿರುವ ಹಿಂದು ಜಾತಿಗಳ ಹೆಸರನ್ನು ತೆಗೆದುಹಾಕಬೇಕು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಗಣತಿ ಹೆಸರಲ್ಲಿ ಜಾತಿ ಗಣತಿಮಾಡಿ ಹಿಂದುಗಳ ನಡುವೆ ಒಡಕು ಮೂಡಿಸುವುದನ್ನು ಕೂಡಲೇ ನಿಲ್ಲಿಸಬೇಕು. ವೀರಶೈವ ಲಿಂಗಾಯತ ಸಮಾಜದಲ್ಲಿ ಗೊಂದಲ ಉಂಟಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ದೂರಿದರು.