

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಮಾತನಾಡುತ್ತಾರೆ. ರಾಜ್ಯಾಧ್ಯಕ್ಷರು ಸಮರ್ಥರಿದ್ದಾರೆ. ಹಾಗಾಗಿಯೇ ವರಿಷ್ಠರು ಅವರಿಗೆ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಕೊಟ್ಟಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಹೊರಗಿನವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಬಿ.ವೈ.ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಿದರು. ಈಶ್ವರಪ್ಪ ಅವರು ಪಕ್ಷದ ಬಗ್ಗೆ ಒಳ್ಳೆಯದನ್ನೇ ಮಾತನಾಡುತ್ತಾರೆ. ಅದಕ್ಕೆ ನಾವು ಬೇಡ ಎನ್ನುವುದಿಲ್ಲ. ಆದರೆ ಅವರನ್ನು ನಾನಂತೂ ಪಕ್ಷಕ್ಕೆ ವಾಪಸ್ ಬನ್ನಿ ಎಂದು ಕರೆದಿಲ್ಲ. ಅವರಿಗೆ ಯಾರು ಆಹ್ವಾನ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿಯಲ್ಲೇ ಒಂದು ತರಹದ ಸ್ವಾತಂತ್ರ್ಯ ಸಿಕ್ಕಿದೆ. ಹಾಗಾಗಿ ಅವರು ಎಲ್ಲರ ಬಗ್ಗೆಯೂ ಮಾತನಾಡುತ್ತಾರೆ ಎಂದು ಹೇಳಿದರು.
ಮುಡಾ ಮಾತ್ರವಲ್ಲ, ಎಸ್‌ಇಪಿಟಿಎಸ್‌ಪಿ ಯೋಜನೆಯಲ್ಲಿ 25 ಸಾವಿರ ಕೋಟಿ ರೂ. ಅವ್ಯವಹಾರ ನಡೆಸಲಾಗಿದೆ. ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಆದರೆ ಕಾಂಗ್ರೆಸ್‌ನವರು 82 ಕೋಟಿ ರೂ. ಮಾತ್ರ ಅವ್ಯವಹಾರವಾಗಿದೆ ಎನ್ನುತ್ತಿದ್ದಾರೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ. ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಒಂದೆರಡು ದಿನಗಳಲ್ಲೇ ಅಭ್ಯರ್ಥಿಗಳ ಘೋಷಣೆ ಆಗಲಿದೆ.- ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ