

ಮಂಡ್ಯ: ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲೆ ಮತ್ತು ಕಾಲೇಜಿನಲ್ಲಿ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ ಆಯೋಜಿಸಲಾಗಿದೆ.
ಕೆಂಪೇಗೌಡರ ಜೀವನ ಸಾಧನೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದಲ್ಲಿ ಸ್ಪರ್ಧೆ ನಡೆಯಲಿದೆ. ತಾಲೂಕು ಮಟ್ಟದಲ್ಲಿ ವಿಜೇತರಾದವರಿಗೆ 1,500 ರೂ ಪ್ರಥಮ, 1 ಸಾವಿರ ರೂ ದ್ವಿತೀಯ ಹಾಗೂ 500 ರೂ ತೃತೀಯ ಬಹುಮಾನವನ್ನು ಜೂ.27ರಂದು ಆಯೋಜಿಸುವ ತಾಲೂಕುಮಟ್ಟದ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು.
ಅಂತೆಯೇ ಜಿಲ್ಲಾಮಟ್ಟದಲ್ಲಿ ವಿಜೇತರಾದವರಿಗೆ 2,500 ರೂ ಪ್ರಥಮ, 1,500 ರೂ ದ್ವಿತೀಯ ಹಾಗೂ 1 ಸಾವಿರ ರೂಗಳನ್ನು ತೃತೀಯ ಬಹುಮಾನವನ್ನು ಜೂ.30ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಿರುವ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.