

ಜನ್ನಾಡಿ: ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಾರಾಯಣಗುರುಗಳ ತತ್ವ ಹಾಗೂ ಜೀವನ ಚರಿತ್ರೆ ವಿಷಯದ ಕುರಿತು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಮ್ಯಾ ಉಡುಪಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು, ಬೋಧಕ/ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.