ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Vijayavani-logo
Published on

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ-2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ/ಇಂಗ್ಲಿಷ್ 1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ‘ಭೂಮಿ ಮತ್ತು ಮಣ್ಣಿನ ಮೇಲೆ ಹವಾಮಾನ ಬದಲಾವಣೆ’ ಶೀರ್ಷಿಕೆಯಡಿಯಲ್ಲಿ ನಡೆಸಲಾಗುತ್ತಿದೆ. ಪ್ರಬಂಧಗಳನ್ನು ಕಳುಹಿಸಲು ಮೇ 27 ಕಡೆಯ ದಿನವಾಗಿರುತ್ತದೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು (ಇಬ್ಬರು ವಿದ್ಯಾರ್ಥಿಗಳ ತಂಡ) ಅಕಾಡೆಮಿಯ ಇ-ಮೇಲ್ ಗೆ ಮೇ 27ರೊಳಗಾಗಿ ನೊಂದಾಯಿಸಿಕೊಳ್ಳಬಹುದಾಗಿದೆ. ರಸಪ್ರಶ್ನೆ ಸ್ಪರ್ಧೆಯನ್ನು ಜೂ.6ರಂದು ಅಕಾಡೆಮಿಯ ಸಭಾಂಗಣದಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಹಿರಿಯ ವೈಜ್ಞಾನಿಕಾಧಿಕಾರಿ ಡಾ. ಆನಂದ್. ಆರ್, ಮೊ: 9880405181 ಇವರನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net