ಅ.25ರಂದು 'ನಾ ಕಂಡಂತೆ ಮೋದಿ' ಪ್ರಬಂಧ ಸ್ಪರ್ಧೆ

Modi
Published on

ಶಾಸಕ ಯಶ್​ಪಾಲ್​ ಸುವರ್ಣ ಮಾಹಿತಿ

ಮಹಾಲಕ್ಷ್ಮೀ ಬ್ಯಾಂಕ್​ನಿಂದ ಆಯೋಜನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ನಿಮಿತ್ತ ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್​ ವತಿಯಿಂದ ವಿದ್ಯಾರ್ಥಿಗಳಿಗಾಗಿ ಅ.25ರಂದು ಬೆಳಗ್ಗೆ 9:30ಕ್ಕೆ ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬ್ಯಾಂಕ್​ನ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್​ ಬ್ರಿಜೇಶ್​ ಚೌಟ ಜಂಟಿಯಾಗಿ ಉದ್ಘಾಟಿಸಲಿದ್ದು, ಬ್ಯಾಂಕ್​ನ ಅಧ್ಯಕ್ಷ ಯಶ್​ಪಾಲ್​ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Modi 2
ಮೋದಿ.

ಸಮಾರಂಭದಲ್ಲಿ ಶಾಸಕರಾದ ವಿ.ಸುನೀಲಕುಮಾರ್​, ಸುರೇಶ ಶೆಟ್ಟಿ ಗುರ್ಮೆ, ಕಿರಣಕುಮಾರ್​ ಕೊಡ್ಗಿ, ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್​ ಸದಸ್ಯರಾದ ಕಿಶೋರಕುಮಾರ್​ ಪುತ್ತೂರು, ಡಾ. ಧನಂಜಯ ಸರ್ಜಿ, ಮಾಜಿ ಸದಸ್ಯ ಕ್ಯಾಪ್ಟನ್​ ಗಣೇಶ್​ ಕಾರ್ಣಿಕ್​, ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ಹೊಸ ದಿಗಂತ ಪತ್ರಿಕೆಯ ಸಿಇಒ ಪಿ.ಎಸ್​. ಪ್ರಕಾಶ್​, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್​, ಜಿಲ್ಲಾ ಬಿಜೆಪಪಿ ಅಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಪಾಲ್ಗೊಳ್ಳಲಿದ್ದಾರೆ.

ಕನ್ನಡ, ಇಂಗ್ಲಿಷ್​ನಲ್ಲಿ ಪ್ರಬಂಧ ಸ್ಪರ್ಧೆ

ಭವಿಷ್ಯದ ಆತ್ಮನಿರ್ಭರ ಭಾರತ ನಿಮಾರ್ಣದ ರೂವಾರಿಗಳಾದ ವಿದ್ಯಾರ್ಥಿಗಳ ದೃಷ್ಟಿಯಲ್ಲಿ ದೇಶ ಕಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ, ಕಾರ್ಯ ಯೋಜನೆ, ಬದ್ಧತೆ ಹಾಗೂ ವಿಕಸಿತ ಭಾರತ ಕಲ್ಪನೆಯ ಕುರಿತಾಗಿ ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ Modi in My Eyes; A Visionary ಎಂಬ ವಿಷಯದ ಬಗ್ಗೆ ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪ್ರಾಥಮಿಕ ವಿಭಾಗ (5-ರಿಂದ 7ನೇ ತರಗತಿ), ಪ್ರೌಢಶಾಲಾ ವಿಭಾಗ (8ರಿಂದ -10), ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಮಾಹಿತಿಗಾಗಿ ಮೊಬೈಲ್​ ಸಂಖ್ಯೆ 9972120332 ಸಂಪರ್ಕಿಸಬಹುದು. ಅಥವಾ ಮಹಾಲಕ್ಷ್ಮೀ ಕೋ-ಆಪರೇಟಿವ್​ ಬ್ಯಾಂಕ್ ವೆಬ್​ ಸೈಟ್ www.mahalakshmicoopbank.com ನಲ್ಲಿ ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಯಶ್​ಪಾಲ್​ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ 75ನೇ ಜನ್ಮದಿನವನ್ನು ಸ್ಮರಣೀಯವಾಗಿಸಲು ಹಾಗೂ ದೇಶಕ್ಕೆ ಅವರ ಕೊಡುಗೆ, ಸಾಧನೆಯನ್ನು ಯುವಸಮುದಾಯಕ್ಕೆ ತಲುಪಿಸಲು ಸ್ಪರ್ಧೆ ಆಯೋಜಿಸಿದ್ದೇವೆ. ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡುವುದಲ್ಲದೆ, ಮಹಾಲಕ್ಷ್ಮೀ ಬ್ಯಾಂಕ್​ನ ವತಿಯಿಂದ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸಲಾಗುವುದು. | ಯಶ್​ಪಾಲ್​ ಸುವರ್ಣ. ಉಡುಪಿ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net