ಶ್ರಾವಣ ಸಂಜೆ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ

nr kasa
ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಶ್ರಾವಣ ಮಾಸ ಕಾರ್ಯಕ್ರಮ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿನಿಗೆ ಬಹುಮಾನ ನೀಡಲಾಯಿತು. ಎಚ್.ಎಸ್.ಪೂರ್ಣೇಶ್, ಸಿ.ಮನೋಹರ್, ಅನಿಲ್‌ವರ್ಗೀಸ್, ಆಶಾ ಇದ್ದರು.
Published on

ಎನ್.ಆರ್.ಪುರ: ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಕಸಾಪದಿಂದ ಶ್ರಾವಣ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶ್ರಾವಣ ಮಾಸದ ಮಹತ್ವದ ಕುರಿತು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಕೆ.ಎಸ್.ನಂದಿತಾ ಪ್ರಥಮ ಸ್ಥಾನ, ರಾಧಿಕಾ ದ್ವಿತೀಯ ಸ್ಥಾನ ಹಾಗೂ ಜಿ.ದಿವ್ಯಾ ತೃತೀಯ ಸ್ಥಾನ ಗಳಿಸಿದರು. ಎಲ್ಲರಿಗೂ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಮಾತನಾಡಿ, ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರ ದಿನಾಚರಣೆಯಂದು ಕಸಾಪದಿಂದ ಪುರಸ್ಕರಿಸಲಾಗುವುದು. ಮಕ್ಕಳಿಗೆ ಕಸಾಪದಿಂದ ಪತ್ರ ಬರೆಯುವ ಹಾಗೂ ಪ್ರಬಂಧ ಸ್ಪರ್ಧೆ ನಡೆಸುವುದರ ಮೂಲಕ ಕನ್ನಡ, ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಶ್ರಾವಣ ಮಾಸದ ಮಹತ್ವದ ಕುರಿತು ಜಿಲ್ಲಾ ಕಸಾಪ ಸಾಂಸ್ಕೃತಿಕ ರಾಯಭಾರಿ ಕಣಿವೆವಿನಯ್ ತಿಳಿಸಿದರು. ಮುತ್ತಿನಕೊಪ್ಪ ಜನಜಾಗೃತಿ ವೇದಿಕೆ ಅಧ್ಯಕ್ಷ ಸಿ.ಮನೋಹರ್ ಮಾತನಾಡಿದರು. ಕಾಲೇಜಿನ ಉಪನ್ಯಾಸಕಿ ಆಶಾ, ಎಸ್‌ಡಿಎಂಸಿ ಅಧ್ಯಕ್ಷ ಅನಿಲ್‌ವರ್ಗೀಸ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net