

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರಸಭೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿಯ ದಿನಾಚರಣೆ ಅಂಗವಾಗಿ ಬಾಪೂಜಿ ಪ್ರಬಂಧ ಸ್ಪರ್ಧೆಯು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರೌಢಶಾಲಾ ವಿಭಾಗ: ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ, ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗ್ಗೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೯೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಪೂರ್ವ ಶಿಕ್ಷಣ ವಿಭಾಗ: ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೧೫೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ: ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, ಗಾಂಧೀಜಿಯವರ ಧಾರ್ಮಿಕ ಸಹಿ?್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿ?ಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು ೨೦೦೦ ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
ವಿಜೇತರಿಗೆ ರಾಜ್ಯ ಮಟ್ಟದಲ್ಲಿ ಪ್ರಥಮ ೩೧ ಸಾವಿರ ರೂ, ದ್ವಿತೀಯ ೨೧ ಸಾವಿರ ರೂ ಮತ್ತು ತೃತೀಯ ೧೧ ಸಾವಿರ ರೂ. ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ೩ ಸಾವಿರ ರೂ, ದ್ವಿತೀಯ ೨ ಸಾವಿರ ರೂ ಮತ್ತು ತೃತೀಯ ೧ ಸಾವಿರ ರೂ. ಬಹುಮಾನ ನೀಡಲಾಗುತ್ತದೆ. ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅ.೨ ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.
ಆಯಾಯ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ತಾಲೂಕು ಮಟ್ಟದಲ್ಲಿ ಮೌಲ್ಯಮಾಪನ ಮಾಡಿ ಪ್ರತಿ ವಿಭಾಗದಿಂದ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮೂವರ ಪ್ರಬಂಧಗಳನ್ನು ಆ.೩೦ ರೊಳಗೆ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ ಇಲ್ಲಿಗೆ ಕಳುಹಿಸಬೇಕು. ಹಚ್ಚಿನ ಮಾಹಿತಿಗಾಗಿ ದೂ.ಸಂ. ೯೪೮೦೮೪೧೨೨೮ ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.